ವಿದೇಶದಿಂದ ಹಿಂದಿರುಗಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ
ಹೊಸದಿಲ್ಲಿ, ಸೆಪ್ಟೆಂಬರ್23: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ಮಂಗಳವಾರ ಮುಂಜಾನೆ ವಿದೇಶದಿಂದ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
73 ರ ಹರೆಯದ ಸೋನಿಯಾ ಗಾಂಧಿ ಸಂಸತ್ತಿನ ಮಾನ್ಸೂನ್ ಅಧಿವೇಶನಕ್ಕೆ ಎರಡು ದಿನಗಳ ಮುಂಚಿತವಾಗಿ ಅಂದರೆ ಸೆಪ್ಟೆಂಬರ್ 12 ರಂದು ತನ್ನ ಸಾಮಾನ್ಯ ವೈದ್ಯಕೀಯ ತಪಾಸಣೆಗಾಗಿ ಅಮೆರಿಕಕ್ಕೆ ಹೋಗಿದ್ದರು. ಅವರೊಂದಿಗೆ ರಾಹುಲ್ ಗಾಂಧಿ ಕೂಡ ಪ್ರಯಾಣ ಬೆಳೆಸಿದ್ದರು. ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಅವರ ವೈದ್ಯಕೀಯ ತಪಾಸಣೆ ವಿಳಂಬವಾಗಿತ್ತು ಎಂದು ಮೂಲಗಳು ತಿಳಿಸಿವೆ.
ಯುಎಸ್ ಗೆ ತೆರಳುವ ಮೊದಲು ಸೋನಿಯಾ ಗಾಂಧಿ ಕಾಂಗ್ರೆಸ್ ನ ಸಾಂಸ್ಥಿಕ ಪುನರ್ರಚನೆಯನ್ನು ತೆರವುಗೊಳಿಸಿದ್ದರು.