ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NEET) ನೀಟ್ 2020 ರ ಸಾಲಿನ ಪರೀಕ್ಷಾ ಫಲಿತಾಂಶ ಅಕ್ಟೋಬರ್ 12 ರಂದು ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ಸೆಪ್ಟೆಂಬರ್ 28 ರಂದು ನೀಟ್ ಪರೀಕ್ಷೆಯ ಕೀ ಉತ್ತರಗಳು ಪ್ರಕಟವಾಗುವ ಸಾಧ್ಯತೆಯೂ ಇದೆ. ನೀಟ್ ಪರೀಕ್ಷೆಯ ಕೀ ಉತ್ತರಗಳು ಸೆಪ್ಟೆಂಬರ್ 28 ರಂದು ಬಿಡುಗಡೆಯಾಗುವ ನಿರೀಕ್ಷೆ ಇದ್ದು, ಅಧಿಕೃತ ವೆಬ್ ಸೈಟ್ ಭೇಟಿ ನೀಡಿ ನೀಟ್ 2020 ತಾತ್ಕಾಲಿಕ ಕೀ ಉತ್ತರವನ್ನು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಡೌನ್ ಲೋಡ್ ಮಾಡಿಕೊಳ್ಳಬಹುದು ಎನ್ನಲಾಗಿದೆ.
ಕರೋನವೈರಸ್ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ 2020ರ ಸೆಪ್ಟೆಂಬರ್ 13ರಂದು ದೇಶಾದ್ಯಂತ ನೀಟ್ 2020 ಪರೀಕ್ಷೆಗಳನ್ನು ನಡೆಸಲಾಗಿದ್ದು,ಈ ಪರೀಕ್ಷೆಗೆ ಒಟ್ಟು 15.97 ಲಕ್ಷ ಅಭ್ಯರ್ಥಿಗಳ ಪೈಕಿ ಶೇ.90ರಷ್ಟು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.








