ನವದೆಹಲಿ: ಹೆಮ್ಮಾರಿ ಕೊರೊನಾ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ(65) ಅವರನ್ನು ಬಲಿ ಪಡೆದುಕೊಂಡಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸುರೇಶ್ ಅಂಗಡಿ ಚಿಕಿತ್ಸೆ ಫಲಕಾರಿಯಾಗದೇ ಸುರೇಶ್ ಅಂಗಡಿ ಮೃತಪಟ್ಟಿದ್ದಾರೆ.
ಕಳೆದ 10 ದಿನಗಳ ಹಿಂದೆ ಸುರೇಶ್ ಅಂಗಡಿ ಅವರಿಗೆ ಕೊರೊನಾ ಅಸಿಂಪ್ಟಾಮ್ಯಾಟಿಕ್ ಲಕ್ಷಣಗಳು ಕಂಡು ಬಂದಿದ್ದವು. ಹೀಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನಗಳಲ್ಲಿ ಡಿಶ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಮೂರು ದಿನಗಳ ಹಿಂದೆ ಅವರ ಆರೋಗ್ಯದ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ವೆಂಟಿಲೇಟರ್ ಅಳವಡಿಸಲಾಗಿತ್ತು. ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ನಾಲ್ಕು ಬಾರಿ ಬೆಳಗಾವಿಯಿಂದ ಸಂಸದರಾಗಿ ಆಯ್ಕೆಯಾಗಿದ್ದ ಸುರೇಶ್ ಅಂಗಡಿ ಅವರನ್ನು ಪ್ರಧಾನಿ ನರೇಂದ್ರ ಅವರು ಕಳೆದ ವರ್ಷ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಪ್ರಮುಖ ಜವಾಬ್ದಾರಿ ನೀಡಿದ್ದರು.
2005, 2009, 2014 ಮತ್ತು 2019ರಲ್ಲಿ ಸತತ ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಸುರೇಶ್ ಅಂಗಡಿ, 1955ರಲ್ಲಿ ಬೆಳಗಾವಿ ತಾಲೂಕಿನ ಕೆ.ಕೆ ಗೊಪ್ಪ ಗ್ರಾಮದಲ್ಲಿ ಜನಿಸಿದ್ದರು. ಸುರೇಶ್ ಅಂಗಡಿ ತಂದೆ ತಂದೆ ಚೆನ್ನಬಸಪ್ಪ ಅಂಗಡಿ, ತಾಯಿ ಸೋಮವ್ವ. ಕಾನೂನು ಪದವಿ ಪಡೆದು ರಾಜಕೀಯ ರಂಗಕ್ಕೆ ಧುಮುಕಿದ್ದ ಸುರೇಶ್ ಅಂಗಡಿ, ವಿವಾದೀತ ಹಾಗೂ ನಿಷ್ಕಳಂಕ ವ್ಯಕ್ತಿತ್ವದ ಅಜಾತಶತೃ ಎಂದು ಮೆಚ್ಚುಗೆಗೆ ಪಾತ್ರರಾಗಿದ್ದರು.
ಅರ್‍ಎಸ್‍ಎಸ್ ಹಿನ್ನೆಲೆಯ ಸುರೇಶ್ ಅಂಗಡಿ, ಧಾರವಾಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸುದೀರ್ಘ ಕಾಲ ಕೆಲಸ ಮಾಡಿದ್ದ ಸುರೇಶ್ ಅಂಗಡಿ, ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬೆಳಗಾವಿಯಲ್ಲಿ ಕೇಸರಿ ಬಾವುಟ ಹಾರಿಸಿ ಬೆಳಗಾವಿ ಜಿಲ್ಲೆಯನ್ನು ಕಮಲ ಪಕ್ಷದ ಭದ್ರಕೋಟೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
65 ವರ್ಷದ ಸುರೇಶ್ ಅಂಗಡಿ ಕೊರೊನಾಗೆ ಬಲಿಯಾದ ರಾಜ್ಯದ ಎರಡನೇ ಬಿಜೆಪಿ ಸಂಸದ. ಕಳೆದ ವಾರ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಕೊರೊನಾಗೆ ಬಲಿಯಾಗಿದ್ದರು.
ಬೆಳಗಾವಿಯಲ್ಲಿ ಕತ್ತಿ ಕುಟುಂಬ, ಹುಕ್ಕೇರಿ ಫ್ಯಾಮಿಲಿ ಹಾಗೂ ಜಾರಕಿಹೊಳಿ ಸಾಹುಕಾರ್ ಬ್ರದರ್ಸ್ ಪ್ರಭಾವಗಳ ನಡುವೆ ರಾಜಕೀಯ ರಂಗದಲ್ಲಿ ಬೆಳೆದ ಅದ್ಭುತ ನಾಯಕ ಸುರೇಶ್ ಅಂಗಡಿ.