ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಕೊರೊನಾ ಸೋಂಕು ಹೆಚ್ಚಿರುವ ಏಳು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫೆರೆನ್ಸ್ ನಡೆಸಿದರು.
ಈ ವೇಳೆ ಅವರು ಕೊರೊನಾ ಕಂಟ್ರೋಲ್ ಗೆ ಲಾಕ್ ಡೌನ್ ಮಾಡುವ ಬಗ್ಗೆ ಸಲಹೆ ನೀಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗಲಿದೆ ಎಂಬ ಚರ್ಚೆ ಶುರುವಾಗಿದೆ.
ಈ ಕುರಿತು ಡಿಸಿಎಂ ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡೋದಿಲ್ಲ ಎಂದಿದ್ದಾರೆ.
ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಪ್ರಧಾನಿಯವರು ಸೂಚಿಸಿದ್ದಾರೆ. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದ್ದೇವೆ.
ಅದರ ಹೊರತಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂಬುದಾಗಿ ಸ್ಪಷ್ಟ ಪಡಿಸಿದರು.








