ಸ್ಯಾಂಡಲ್ ವುಡ್ ನಲ್ಲಿ ಶುರುವಾದ ಡ್ರಗ್ಸ್ ಅಲೆ ಬಳಿಕ ಕಿರುತೆರೆಗೆ ಎಂಟ್ರಿಯಾಗಿತ್ತು.
ಇದೀಗ ಖ್ಯಾತ ಹೆಸರಾಂತ ನಿರೂಪಕಿ ಅನುಶ್ರೀಗೂ ಡ್ರಗ್ಸ್ ಕಂಟಕ ಶುರುವಾಗಿದೆ.
ಅನುಶ್ರೀಗೂ ಸಿಸಿಬಿಯಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.
ಮಂಗಳೂರು ಸಿಸಿಬಿ ಪೊಲೀಸರು ವಾಟ್ಸ್ಆಪ್ ಮೂಲಕ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡ್ರಗ್ಸ್ ಲಿಂಕ್ ಕೇಸ್ ನಲ್ಲಿ ಬಂಧಿತನಾಗಿರುವ ಕಿಶೋರ್ ಶೆಟ್ಟಿ ವಿಚಾರಣೆ ವೇಳೆ ಅನುಶ್ರೀ ಹೆಸರು ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.
ಇನ್ನೂ ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಅನುಶ್ರೀ ಭಾಗಿಯಾಗಿದ್ರು ಎಂಬ ಮಾಹಿತಿ ಸಿಕ್ಕಿದೆ ಎನ್ನಲಾಗುತ್ತಿದೆ.








