ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಸಿದ್ದರಾಮಯ್ಯ

admin by admin
September 24, 2020
in Newsbeat, Politics, ರಾಜಕೀಯ
Chamarajanagar
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ.

ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಸಂತಾಪ ನಿರ್ಣಯದ ನಂತರ ಮುಂದೂಡಲಾಗಿದ್ದ ಸದನ ಸಮಾವೇಶಗೊಂಡಾಗ ಸಿದ್ದರಾಮಯ್ಯ ಮಾತನಾಡಿ, ಯಡಿಯೂರಪ್ಪ ನೇತೃತ್ವದ ಮಂತ್ರಿ ಮಂಡಲದಲ್ಲಿ ಈ ಸದನವು ವಿಶ್ವಾಸ ಕಳೆದುಕೊಂಡಿದೆ. ಸರ್ಕಾರದ ಮೇಲೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.

Related posts

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

June 13, 2026
ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

June 13, 2026

ಈ ವೇಳೆ ಮಧ್ಯ ಪ್ರವೇಶಿಸಿದ ಸ್ಪೀಕರ್ ಅವರು, ನೀವು ನೀಡಿರುವ ನೋಟಿಸ್ ತಲುಪಿದೆ. ನಿಯಮಾವಳಿ ಪ್ರಕಾರ ಮಾಡುತ್ತೇನೆ.

ವಿರೋಧ ಪಕ್ಷದ ನಾಯಕರು ನೀಡಿರುವ ಪ್ರಸ್ತಾಪದ ಪರವಾಗಿರುವವರು ಎದ್ದು ನಿಲ್ಲಬೇಕು ಎಂದು ಹೇಳಿದರು.

ಆಗ ಸಿದ್ದರಾಮಯ್ಯ ಅವರು ಪ್ರಸ್ತಾಪದ ಪರವಾಗಿ ಕನಿಷ್ಠ 23 ಸದಸ್ಯರು ಇದ್ದರೆ ಸಾಕು. ನಾವು ಅದಕ್ಕಿಂತ ಹೆಚ್ಚಿದ್ದೇವೆ ಎಂದರು.

ಆಗ ಸಚಿವ ಆರ್.ಅಶೋಕ್ ಮಾತನಾಡಿ, ಹೆಚ್ಚಾದರೆ ಅಮೃತವೂ ವಿಷವಾಗುತ್ತದೆ ಎಂದು ಛೇಡಿಸಿದರು.

ಆಗ ಸಭಾಧ್ಯಕ್ಷರು ಗಂಭೀರ ವಿಷಯ ಪ್ರಸ್ತಾಪವಾಗಿದೆ ಎಂದು ಹೇಳಿ ಪ್ರಸ್ತಾವದ ಪರವಾಗಿ 23 ಜನಕ್ಕಿಂತ ಹೆಚ್ಚು ಸದಸ್ಯರು ಇದ್ದೀರಿ. ಹೀಗಾಗಿ ಸದನದ ಅನುಮತಿ ಇದೆ ಎಂದು ಪ್ರಕಟಿಸಿದರು.

ಚರ್ಚೆಯ ದಿನಾಂಕ ಮತ್ತು ಸಮಯವನ್ನು ನಾಳೆ ಮತ್ತು ನಾಡಿದ್ದರೊಳಗೆ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.

ಹೊಸ ಸುದ್ದಿಗಳನ್ನು ಇಲ್ಲಿ ಓದಿ

ಆಗ ಸಿದ್ದರಾಮಯ್ಯ ಮಾತನಾಡಿ, ಹೆಚ್ಚು ದಿನ ನಾನು ಒತ್ತಾಯ ಮಾಡುವುದಿಲ್ಲ. ಮೂರು ದಿನದೊಳಗೆ ನಿರ್ಣಯ ಪ್ರಕಟಿಸುವುದು ಸೂಕ್ತ ಎಂದರು.

ಆಗ ಮತ್ತೆ ಎದ್ದು ನಿಂತ ಕಂದಾಯ ಸಚಿವರು, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ದೇಶದಲ್ಲೂ ಬಹುಮತ ಇಲ್ಲ.

ರಾಜಕೀಯ ಗಿಮಿಕ್ ಗಾಗಿ ಅವಿಶ್ವಾಸ ನಿರ್ಣಯ ಪ್ರಸ್ತಾಪ ಮಂಡಿಸಿದೆ ಎಂದು ಕಿಡಿಕಾರಿ, ಮತಕ್ಕೆ ಹಾಕಿದರೆ ಸೋಲುವುದು ಖಚಿತ ಎಂದು ಛೇಡಿಸಿದರು.

ಅಶೋಕ್ ರ ಈ ಮಾತಿಗೆ ಸಿಡಿದ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಪ್ರಸ್ತಾಪವಾಗಿದೆ. ಇದಕ್ಕೆ ಸದನದ ಒಪ್ಪಿಗೆ ಸಿಕ್ಕಿದೆ.

ಹೀಗಿರುವಾಗ ಈ ಕುರ್ಚಿಯಲ್ಲಿ ಕೂರಲು ಯಾರಿಗೂ ಅರ್ಹತೆ ಇಲ್ಲ. ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು.

ಅವಿಶ್ವಾಸ ನಿರ್ಣಯ ಪ್ರಸ್ತಾಪ ಮಂಡಿಸಿರುವ ಸಂದರ್ಭದಲ್ಲಿ ಸರ್ಕಾರ ಮಸೂದೆ ಮಂಡನೆಯಂತಹ ಯಾವುದೇ ಮಹತ್ವದ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಗುಡುಗಿದರು.

Tags: bangaloreBJPR AshokSiddaramaiah
ShareTweetSendShare
Join us on:

Related Posts

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

by Shwetha
June 13, 2026
0

ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಿಂದ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯವು ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram