ತಿರುಪತಿ : ತಿರುಮಲದ ಬಳಿ ಸುಮಾರು 200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಯಾತ್ರಾರ್ಥಿ ಸಂಕೀರ್ಣಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಈ ವೇಳೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ ರೆಡ್ಡಿ, ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಉಪಸ್ಥಿತರಿದ್ದರು.
ಈ ಸಂಕೀರ್ಣದ ಪೂರ್ಣ ವೆಚ್ಚವನ್ನು ಕರ್ನಾಟಕ ಸರ್ಕಾರವೇ ಭರಿಸಲಿದ್ದು, ಟಿಟಿಡಿ ಸಂಕೀರ್ಣ ಹಾಗೂ ಮದುವೆ ಸಭಾಂಗಣವನ್ನು ನಿರ್ಮಾಣ ಮಾಡಲಿದೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಂಕುಸ್ಥಾಪನೆಗೂ ಮುನ್ನ ಬಿಎಸ್ ವೈ ಹಾಗೂ ಸಿಎಂ ಜಗನ್ ಮೋಹನ್ ರೆಡ್ಡಿ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ವಿಶ್ವವನ್ನು ಕೋವಿಡ್-19ನಿಂದ ರಕ್ಷಿಸುವ ಉದ್ದೇಶದಿಂದ ಕಳೆದ ಮೂರು ತಿಂಗಳಿಂದ ನಡೆಸಲಾಗುತ್ತಿರುವ ‘ಸುಂದರಕಾಂಡ ಪಾರಾಯಣ’ದಲ್ಲೂ ಉಭಯಯರು ಭಾಗವಹಿಸಿದ್ದರು.