ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮಾದಕ ಲೋಕದಲ್ಲಿ “ಅನು”ಬಂಧ..!

admin by admin
September 25, 2020
in Cinema, Newsbeat, ಮನರಂಜನೆ
kannada anchor anushree summoned by ccb
Share on FacebookShare on TwitterShare on WhatsappShare on Telegram

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಘಾಟು ಜೋರಾಗಿಯೇ ಇದ್ದು, ಈಗಾಗಲೇ ಅನೇಕ ತಾರೆಯರಿಗೆ ಕಂಟಕ ಶುರುವಾಗಿದೆ. ಡ್ರಗ್ಸ್ ಲಿಂಗ್ ಆರೋಪ ಪ್ರಲರಣ ಸಂಬಂಧ ಈಗಾಗಲೇ ತುಪ್ಪದ ಬೆಡಗಿ ರಾಗಿಣಿ ಹಾಗೂ ಸಂಜನಾ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಚಂದನವನದಲ್ಲಿ ಶುರುವಾದ ಡ್ರಗ್ಸ್ ಅಲೆ ಕಿರುತೆರೆಗೂ ಲಗ್ಗೆ ಇಟ್ಟಿತ್ತು. ಕಿರುತೆರೆಯ ಹೆಸರಾಂತ ನಟರಿಗೂ ಡ್ರಗ್ಸ್ ಲಿಂಕ್ ಇದೆ ಎನ್ನಲಾಗಿತ್ತು. ಅಲ್ಲದೇ ಬ್ರಹ್ಮಗಂಟು ಗೀತಾ, ಗಟ್ಟಿಮೇಳದ ಅಭಿಷೇಕ್ ದಾಸ್, ರಶ್ಮಿಕಾ ಚಂಗಪ್ಪಗೆ ಸಿಸಿಬಿ ನೋಟೀಸ್ ಜಾರಿ ಮಾಡಿತ್ತು.

kannada anchor anushree summoned by ccb
ಇದೀಗ ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿಯಾಗಿ ಅತ್ಯಂತ ಹೆಚ್ಚು ಜನಪ್ರಿಯತೆ ಗಳಿಸಿರುವ ಅನುಶ್ರೀಗೂ ನಶೆ ಕಂಟಕ ಎದುರಾಗಿದೆ. ನಿರೂಪಣೆಯಿಂದಲೇ ಹೆಚ್ಚಾಗಿ ಜನಮನ್ನಣೆ ಪಡೆದಿರುವ ಅನುಶ್ರೀಗೂ ಸಿಸಿಬಿ ನೋಟಿಸ್ ಜಾರಿಯಾಗಿದೆ. ಅನುಶ್ರೀ ಈಗಾಗಲೇ ವಿಚಾರಣೆಗೆ ಹಾಜರಾಗಿದ್ದಾರೆ. ಇತ್ತೀಚೆಗಷ್ಟೇ ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆದ ಡ್ಯಾನ್ಸರ್ ಕಿಶೋರ್ ಶೆಟ್ಟಿ ಹೇಳಿಕೆ ಆಧರಿಸಿ ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ. ಇನ್ನೂ ಮೂಲಗಳ ಪ್ರಕಾರ ಅನುಶ್ರೀ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಡ್ರಗ್ಸ್ ಪಾರ್ಟಿಯಲ್ಲೂ ಬಾಗಿಯಾಗಿದ್ದ ಬಗ್ಗೆ ಕಿಶೋರ್ ಹೇಳಿರುವುದು ತಿಳಿದು ಬಂದಿದೆ. ಇದೇ ಹಿನ್ನೆಲೆ ಅನುಶ್ರೀಗೆ ಸಿಸಿಬಿ ಬುಲಾವ್ ನೀಡಿರುವ ಸಾಧ್ಯತೆಯಿದೆ.

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

ಅಂದ್ಹಾಗೆ ಕನ್ನಡದ ಚಿರಪರಿಚಿತ ನಿರೂಪಿಯಾಗಿರುವ ಅನುಶ್ರೀ 1990ರ ಜುಲೈ 30ರಂದು ಬೆಂಗಳೂರಿನಲ್ಲಿ ಜನಿಸಿದ್ರು. ಅನುಶ್ರೀ ತಂದೆ ಸಂಪತ್, ಮತ್ತು ತಾಯಿ ಶಶಿಲಾ. ಅನುಶ್ರೀ ಮೂಲತಃ ತುಳುವಿನವರಾಗಿದ್ದು, ವಿದ್ಯಾಭ್ಯಾಸ ಮುಗಿಯುತ್ತಿದ್ದಂತೆ ಅವರನ್ನು ದೂರದರ್ಶನದಲ್ಲಿ ಕೆಲಸ ಮಾಡುವ ಅವಕಾಶ ಹುಡುಕಿಕೊಂಡುಬಂದಿತ್ತು.

kannada anchor anushree summoned by ccb
ಮೊದಲಿಗೆ ಅನುಶ್ರೀ ಅವರು ಮಂಗಳೂರಿನಲ್ಲಿ ನಮ್ಮ ಟಿವಿಯಲ್ಲಿ ಪ್ರಸಾರವಾದ ಟೆಲಿ ಅಂತ್ಯಾಕ್ಷರಿಯಲ್ಲಿ ನಿರೂಪಣೆ ಮಾಡುವ ಮೂಲಕ ವೃತ್ತಿ ಜೀವನವನ್ನ ಆರಂಭಿಸಿದ್ದರು. ಬಳಿಕ ಜನಪ್ರಿಯ ಖಾಸಗಿ ವಾಹಿಯಲ್ಲಿ ಡಿಮ್ಯಾಂಡಪ್ಪೋ ಡಿಮ್ಯಾಂಡು ಟಿವಿ ಶೋ ನಡೆಸಿಕೊಟ್ಟು ಜನರಿಗೆ ಚಿರ ಪರಿಚಿತರಾದರು. ಇಲ್ಲಿಂದಲೇ ಅನುಶ್ರೀ ಅವರು ಹೆಚ್ಚು ಪ್ರಸಿದ್ಧಿ ಗಳಿಸಿ ಒಂದಾದ ಮೇಲೊಂದು ಅವಕಾಶಗಳನ್ನ ತಮ್ಮದಾಗಿಸಿಕೊಂಡ್ರು. ಇನ್ನೂ ಸರಿಗಮಪ ಸೇರಿದಂತೆ ಹಲವಾರು ರಿಯಾಲಿಟಿ ಶೋಗಳನ್ನ ಹೋಸ್ಟ್ ಮಾಡಿರುವ ಅನು ಬಿಗ್ ಬಾಸ್ ಕನ್ನಡ ಸೀಸನ್ 1 ನಲ್ಲಿ ಪ್ರತಿಸ್ಪರ್ಧಿಯೂ ಆಗಿದ್ದರು. 80 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿದ್ದು, ತದನಂತರು ಮನೆಯಿಂದ ಆಚೆ ಬಂದಿದ್ದರು.

ಇದರ ಹೊರತಾಗಿ ಅನು ಹಲವಾರು ಸ್ಟೇಜ್ ಕಾರ್ಯಕ್ರಮಗಳನ್ನೂ ಸಹ ಹೋಸ್ಟ್ ಮಾಡಿದ್ದಾರೆ. ಸುವರ್ಣ ಫಿಲ್ಮ್ ಅವಾರ್ಡ್ಸ್, ಫಿಲ್ಮ್ ಫೇರ್ ಅವಾರ್ಡ್ಸ್, TV9 ಫಿಲ್ಮ್ ಫೇರ್ ಅವಾರ್ಡ್ಸ್, ಝೀ ಮ್ಯೂಸಿಕ್ ಅವಾರ್ಡ್ಸ್ ಹೀಗೆ ಹಲವಾರು ಕಾರ್ಯಕ್ರಮಗಳಲ್ಲಿ ತಮ್ಮ ಅದ್ಭುತ ನಿರೂಪಣೆಯಿಂದಲೇ ಜನರ ಆಚ್ಚು ಮೆಚ್ಚಿನ ಆಂಕರ್ ಎನಿಸಿಕೊಂಡಿದ್ದಾರೆ ಅನುಶ್ರೀ.

kannada anchor anushree summoned by ccb
ಕೇವಲ ನಿರೂಪಣೆ ಅಷ್ಟೇ ಅಲ್ಲದೇ ಅನು ಬೆಂಕಿಪಟ್ಟಣ, ಉಪ್ಪು ಹುಳಿ ಖಾರದಂತಹ ಸಿನೆಮಾಗಳಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿ ಸ್ಯಾಮಡಲ್ ವುಡ್ ನಲ್ಲಿ ಹೆಸರು ಮಾಡಿದ್ದಾರೆ. ಅಲ್ಲದೇ ಮುರುಳಿ ಮೀಟ್ಸ್ ಮೀರಾ ಚಿತ್ರಕ್ಕಾಗಿ ಕರ್ನಾಟಕ ಸ್ಟೇಟ್ ಫಿಲ್ಮ್ ಅವಾರ್ಡ್ ಫಾರ್ ಬೆಸ್ಟ್ ಡಬ್ಬಿಂಗ್ ಆರ್ಟಿಸ್ಟ್ ಅವಾರ್ಡ್ ತಮ್ಮದಾಗಿಸಿಕೊಂಡಿದ್ದಾರೆ. ಬೆಂಕಿಪಟ್ಟಣ ಚಿತ್ರಕಕ್ಕಾಗಿ ಬೆಸ್ಟ್ ಡೆಬ್ಯೂಟ್ ನಟಿ ಪ್ರಶಸ್ತಿಗೂ ಭಾಜರಾಗಿದ್ದಾರೆ ಅನುಶ್ರೀ.

ಇಷ್ಟೆಲ್ಲಾ ಖ್ಯಾತಿ ಗಳಿಸಿ ಅಪಾರ ಅಭಿಮಾನಿಗಳನ್ನೂ ಸಂಪಾದನೆ ಮಾಡಿರುವ ಅನು ಸದ್ಯಕ್ಕೆ ಕನ್ನಡದ ಟಾಪ್ ನಿರೂಪಕರಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಅಲ್ಲದೇ ಮೋಸ್ಟ್ ಬ್ಯುಸಿಯೆಸ್ಟ್ ಆಂಕರ್ ಕೂಡ ಹೌದು. ಆದ್ರೆ ಡ್ರಗ್ಸ್ ಲಿಂಕ್ ನಲ್ಲಿ ಅನು ಹೆಸರು ಸೇರಿಕೊಂಡಿದ್ದು, ವಿಚಾರಣೆಗೆ ಹಾಜರಾಗಿದ್ದಾರೆ. ಸದ್ಯ ಸಂಪೂರ್ಣ ತನಿಖೆಯ ಬಳಿಕವೇ ಅನುಶ್ರೀಗೆ ನಿಜಕ್ಕೂ ಡ್ರಗ್ಸ್ ಪೆಡ್ಲರ್ ಗಳ ಜೊತೆಗೆ ಲಿಂಕ್ ಇತ್ತ ಇಲ್ಲವ ಎಂಬ ಸತ್ಯಾಂಶ ಹೊರಬರಬೇಕಿದೆ.

Tags: drugs linkkannda anchor anushreeSandalwood
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram