ಮಂಗಳೂರು: ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ಕಿರುತೆರೆ ಆಂಕರ್ ಅನುಶ್ರೀ ಇಂದು ಮಂಗಳೂರು ಸಿಸಿಬಿ ಪೊಲೀಸರ ವಿಚಾರಣಕ್ಕೆ ಚಕ್ಕರ್ ಹೊಡೆದಿದ್ದಾರೆ. ಬೆಂಗಳೂರಿನಿಂದ ಬಂದು ಮಂಗಳೂರಿನಲ್ಲೇ ಇದ್ದರೂ ಅನುಶ್ರೀ ಸಿಸಿಬಿ ವಿಚಾರಣೆಯಿಂದ ದೂರ ಉಳಿದಿದ್ದಾರೆ.
ಇದು ಮಂಗಳೂರು ಪೊಲೀಸರ ಅಸಮಾಧಾನಕ್ಕೆ ಕಾರಣವಾಗಿದೆ. ಯಾವುದೇ ಕಾರಣಕ್ಕೂ ನಾಳೆ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಲೇಬೇಕು, ತಪ್ಪಿಸಿಕೊಂಡರೆ ಪರಿಣಾಮ ನೆಟ್ಟಗಿರಲ್ಲ ಎಂಬ ಸಂದೇಶವನ್ನು ಸಿಸಿಬಿ ಪೊಲೀಸರು ಅನುಶ್ರೀಗೆ ಕೊಟ್ಟಿದ್ದಾರೆ ಎನ್ನಲಾಗಿದೆ.
ಮಂಗಳೂರಿನಲ್ಲಿದ್ದು ವಕೀಲರ ಜತೆ ಮುಂದಿನ ಕಾನೂನು ನಡೆಗಳ ಬಗ್ಗೆ ಚರ್ಚೆ ನಡೆಸಿರುವ ಅನುಶ್ರೀಗೆ ನಾಳೆ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ವಕೀಲರು ಸಲಹೆ ನೀಡಿದ್ದಾರೆ. ಹೀಗಾಗಿ ನಾಳೆ ಅನುಶ್ರೀ ಸಿಸಿಬಿ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇಂದು ಪಾಂಡೇಶ್ವರದ ನಾರ್ಕೋಟಿಕ್ಸ್ ಠಾಣೆಯಲ್ಲಿ ಅನುಶ್ರೀ ವಿಚಾರಣೆಗೆ ಸಿಸಿಬಿ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದರು. ಆರೋಪಿಗಳಾದ ಕಿಶೋರ್ ಶೆಟ್ಟಿ ಹಾಗೂ ತರುಣ್ ರಾಜ್ ಜೊತೆ ಅನುಶ್ರೀಯನ್ನು ಕೂರಿಸಿ ವಿಚಾರಣೆ ನಡೆಸಲು ಪೊಲೀಸರು ಪ್ಲಾನ್ ಮಾಡಿಕೊಂಡಿದ್ದರು. ಆದರೆ, ಅನುಶ್ರೀ ಬಾರದ ಹಿನ್ನೆಲೆಯಲ್ಲಿ ಕಿಶೋರ್, ತರುಣ್‍ನನ್ನು ನ್ಯಾಯಾಯಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ವಿಚಾರಣೆ ವೇಳೆ ಆರೋಪಿಗಳು ನೀಡಿದ ಹೇಳಿಕೆ ಹಾಗೂ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಮಂಗಳೂರು ಸಿಸಿಬಿ ಪೊಲೀಸರಿಂದ ನಾಳೆ ಅನುಶ್ರೀ ವಿಚಾರಣೆ ನಡೆಯಲಿದೆ.
ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ
ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನಂತರದ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ...








