ಮೈಸೂರು : ವಿಶ್ವವಿಖ್ಯಾತ ದಸರೆಗೆ ದಿನಗಣನೆ ಆರಂಭವಾಗಿದ್ದು, ದಸರಾ ಸಿದ್ಧತೆ ಜೋರಾಗಿ ನಡೆಯುತ್ತಿದೆ.
ಅದರ ಭಾಗವಾಗಿ ಮೈಸೂರು ಅರಮನೆಯ ದೀಪಾಲಂಕಾರಕ್ಕಾಗಿ ಬಲ್ಬ್‍ಗಳ ಪರಿಶೀಲನೆ ಹಾಗೂ ಕೆಟ್ಟು ಹೋದ ಬಲ್ಬ್‍ಗಳನ್ನು ಬದಲಾಯಿಸುವ ಕೆಲಸ ನಡೆಯುತ್ತಿದೆ.
ವಿಶೇಷತೆ ಏನಂದರೇ ಈ ಬಾರಿ ಮೈಸೂರು ದಸರಾ ದೀಪಾಲಂಕಾರದಲ್ಲಿ ಆತ್ಮ ನಿರ್ಭರ ಭಾರತಕ್ಕೆ ಒತ್ತು ಕೊಡಲಾಗಿದೆ.
ರಾಜ್ಯದ ಕೆಲವೆಡೆ ಮತ್ತೆ ಮಳೆ ಅಬ್ಬರ : ರೈತರಲ್ಲಿ ಆತಂಕ
ಹೌದು..! ದೇಶದೆಲ್ಲೆಡೆ ಸದ್ಯ ಆತ್ಮ ನಿರ್ಭರ ಭಾರತದ ಸದ್ದಿದೆ. ಹೀಗಾರಿ ದಸರೆಯಲ್ಲೂ ಆತ್ಮ ನಿರ್ಭರತೆ ಪ್ರಜ್ವಲಿಸಲಿದ್ದು, ದಸರೆಯ ದೀಪಾಲಂಕಾರದಲ್ಲಿ ಚೈನಾದ ಬಲ್ಬ್‍ಗಳನ್ನು ಬಳಸದಿರಲು ನಿರ್ಧರಿಸಲಾಗಿದೆ.
ಈ ಕುರಿತು ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಮಾಹಿತಿ ನೀಡಿದ್ದು, ಮೈಸೂರು ದಸರಾ ವೇಳೆ 60 ರಿಂದ 75 ಕಿಲೋಮೀಟರ್ ಉದ್ದದ ರಸ್ತೆಗಳಿಗೆ ದೀಪಾಲಂಕಾರ ಮಾಡಲಾಗುತ್ತದೆ.
ಇದಕ್ಕಾಗಿ ಮುಂಬೈ, ದೆಹಲಿ ಮತ್ತು ಕೊಲ್ಕತ್ತಾದಿಂದ ಬಲ್ಬ್‍ಗಳು ಹಾಗೂ ವಿವಿಧ ಬಿಡಿಭಾಗಗಳನ್ನು ತರಿಸಿಕೊಳ್ಳಲಾಗುತ್ತದೆ. ಆದ್ರೆ ಈ ಬಾರಿ ಸ್ಥಳೀಯ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಚೀನಾದ ಯಾವುದೇ ವಸ್ತುಗಳನ್ನು ದಸರಾ ದೀಪಾಲಂಕಾರದಲ್ಲಿ ಬಳಸದಿರಲು ನಿರ್ಧರಿಸಲಾಗಿದೆ ಎಂದಿದ್ದಾರೆ.








