ಕೈವ್ : ಲ್ಯಾಂಡಿಂಗ್ ವೇಳೆ ವಾಕ್ರೆನಯನ್ ವಾಯುಪಡೆಯ ವಿಮಾನ ಪತನವಾಗಿ ಮಿಲಿಟರಿ ಸಿಬ್ಬಂದಿ ಸೇರಿದಂತೆ 22 ಮೃತಪಟ್ಟಿರುವ ಘಟನೆ ಕೈವ್ ನ ಖಾರ್ಕಿವ್ ಬಳಿ ನಡೆದಿದೆ.
ಈ ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆ ದಾಖಲಿಸಲಾಗಿದೆ. ಉಳಿದವರಿಗಾಗಿ ಹುಡುಕಾಟ ಮುಂದುವರಿದಿದೆ.
ಈ ವಿಮಾನದಲ್ಲಿ 28 ಮಂದಿ ಪ್ರಯಾಣಿಸುತ್ತಿದ್ದರು. ಇದರಲ್ಲಿ 21 ಖಾರ್ಕಿವ್ ರಾಷ್ಟ್ರೀಯ ವಾಯುಪಡೆಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಏಳು ಸಿಬ್ಬಂದಿ ಇದ್ದರು.
ವಿಶ್ವವಿಖ್ಯಾತ ದಸರೆಯಲ್ಲೂ ಆತ್ಮ ನಿರ್ಭರ ಭಾರತ
ಉಕ್ರೇನ್ ರಾಜಧಾನಿ ಕೈವ್ ನಿಂದ ಸುಮಾರು 400 ಕಿ.ಮೀ. ದೂರವಿರುವ ಚುಹುಯಿವ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಈ ಅವಘಡ ಸಂಭವಿಸಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ರಕ್ಷಣಾ ಪಡೆ, ಅಗ್ನಿಶಾಮಕ ದಳ ದೌಡಾಯಿಸಿದ್ದು, ಒಂದು ಗಂಟೆಯ ನಂತರ ಬೆಂಕಿಯನ್ನು ನಂದಿಸಲಾಗಿದೆ. ಆದರೆ ಇದುವರೆಗೂ ವಿಮಾನ ಪತನಕ್ಕೆ ಕಾರಣ ಏನೆಂದು ತಿಳಿದುಬಂದಿಲ್ಲ.








