ನವದೆಹಲಿ : ಇಂದು ಮಾಜಿ ಪ್ರಧಾನಿ, ಕಾಂಗ್ರೆಸ್ ನ ಹಿರಿಯ ನಾಯಕ ಡಾ. ಮನಮೋಹನ್ ಸಿಂಗ್ ಅವರ ಜನ್ಮದಿನ. 88 ನೇ ವಸಂತಕ್ಕೆ ಕಾಲಿಟ್ಟ ಅವರಿಗೆ ರಾಜಕೀಯ ಗಣ್ಯರು ಸೋಶಿಯಲ್ ಮೀಡಿಯಾ ಮೂಲಕ ಶುಭ ಹಾರೈಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ‘ಡಾ.ಮನಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಗವಂತನು ಅವರಿಗೆ ಆಯಸ್ಸು, ಉತ್ತಮ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
Birthday greetings to Dr. Manmohan Singh Ji. I pray to Almighty that he is blessed with a long and healthy life.
— Narendra Modi (@narendramodi) September 26, 2020
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಟ್ವಿಟ್ಟರ್ ನಲ್ಲಿ ಸಿಂಗ್ ಅವರಿಗೆ ಶುಭಕೋರಿದ್ದು, ‘ಮನಮೋಹನ್ ಸಿಂಗ್ ಅವರಂತಹ ಆಳವಾದ ಜ್ಞಾನವುಳ್ಳ ಪ್ರಧಾನಿಯ ಕೊರತೆ ಇಂದು ಭಾರತದಲ್ಲಿ ಎದ್ದು ಕಾಣುತ್ತಿದೆ. ಅವರ ಪ್ರಮಾಣಿಕತೆ, ಸಭ್ಯತೆ ಮತ್ತು ಸಮರ್ಪಣಾ ಮನೋಭಾವ ನಮಗೆಲ್ಲ ಸ್ಫೂರ್ತಿಯ ಮೂಲ. ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.








