ಬೆಂಗಳೂರು : ಸಚಿವ ಸಿ.ಟಿ ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಜಾರಿ ಮಾಡಿದ್ದಾರೆ. ಈ ಮೂಲಕ ಸಿ.ಟಿ.ರವಿ ರಾಷ್ಟ್ರೀಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡಿದಂತೆ ಆಗಿದೆ. ಇದರ ಬೆನ್ನಲ್ಲೆ ಸಿ.ಟಿ ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ.
ಏಕೆಂದರೆ ಬಿಜೆಪಿ ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನ ಎಂಬ ಸೂತ್ರವಿದೆ. ಹೀಗಾಗಿಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ಅವರು ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರು. ಅದರಂತೆ ಸಿ.ಟಿ ರವಿ ಅವರು ಕೂಡ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ.
ಮೊದಲ ಗೆಲುವಿಗಾಗಿ ಕೆಕೆಆರ್-ಎಸ್ ಆರ್ ಹೆಚ್ ಗುದ್ದಾಟ
ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಪಕ್ಷದ ವಿವಿಧ ಹುದ್ದೆಗಳಿಗೆ ವಿವಿಧ ರಾಜ್ಯಗಳ ಬಿಜೆಪಿ ಮುಖಂಡರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.ಆದೇಶದಲ್ಲಿ ಬಿಜೆಪಿಯ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕಗೊಂಡಿದ್ದರೇ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಚಿವ ಸಿಟಿ ರವಿ ಅವರನ್ನು ನೇಮಕ ಮಾಡಲಾಗಿದೆ.








