ಕೊಟ್ಟಾಯಂ : ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಸಿ.ಎಫ್.ಥಾಮಸ್ ತಿರುವಲ್ಲದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದ ಕಾರಣ ಥಾಮಸ್ ಅವರನ್ನು ಕಳೆದ ಹಲವು ದಿನಗಳಿಂದೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ತಿರುವಲ್ಲದ ಬಿಲಿವರ್ಸ್ ಚರ್ಚ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪಕ್ಷ ಸಂಘಟನೆಗಾಗಿ ಸಚಿವ ಸ್ಥಾನ ಬಿಡಲು ಸಿದ್ಧ : ಸಿ.ಟಿ ರವಿ
1956 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ್ದ ಥಾಮಸ್ ಅವರು, ಕೇರಳ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸಿದರು.
1980, 1982, 1987, 1991, 1996, 2001, 2006, 2011 ಹಾಗೂ 2016 ಹೀಗೆ ಸತತ 9 ಬಾರಿ ಚಂಗನಸ್ಸೇರಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಎ ಕೆ ಆಂಟೋನಿ ಮುಖ್ಯಮಂತ್ರಿಯಾದ ಅವಧಿಯಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.








