ಬೆಂಗಳೂರು : ಕೆಲವೇ ದಿನಗಳಲ್ಲಿ ನಾವು ಸಚಿವರಾಗುತ್ತೇವೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದಷ್ಟು ಬೇಗ ನಮ್ಮನ್ನು ಸಚಿವರನ್ನಾಗತಿ ಮಾಡ್ತಾರೆ ಎಂದು ಬಿಜೆಪಿ ಎಂಎಲ್ ಸಿ ಎಂಟಿಬಿ ನಾಗರಾಜ್ ಹೇಳಿದ್ದಾರೆ.
ಸಚಿವ ಸ್ಥಾನ ಸಂಬಂಧ ಇಂದು ಎಂಎಲ್ ಸಿ ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದರು.
ಕಾಂಗ್ರೆಸ್ ಹಿರಿಯ ನಾಯಕ ಸಿ.ಎಫ್ ಥಾಮಸ್ ಇನ್ನಿಲ್ಲ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ ನಾಗರಾಜ್, ಮುಂದಿನ ದಿನಗಳಲ್ಲಿ ನಾವು ಸಚಿವರಾಗುತ್ತೇವೆ.
ಇಂದು ಸಿಎಂ ಜೊತೆ ಚರ್ಚೆ ನಡೆಸಿದ್ದು, ಆದಷ್ಟು ಬೇಗ ನಮ್ಮನ್ನು ಸಚಿವರನ್ನಾಗಿ ಮಾಡುತ್ತಾರೆ ಎಂದು ಹೇಳಿದ್ದಾರೆ.
ಹೀಗಾಗಿ ನಮಗೆ ಕೆಲವೇ ದಿನಗಳಲ್ಲಿ ಸಚಿವ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.








