ಬೆಳಗಾವಿ : ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಕರೆಕೊಟ್ಟಿರುವ ಕರ್ನಾಟಕ ಬಂದ್ ಗೆ ಬೆಳಗಾವಿಯ ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ, ನಾಳೆ ಕರ್ನಾಟಕ ಬಂದ್ ಬೆಂಬಲಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ನಾಳೆ ಬೆಳಗ್ಗೆ 11 ಗಂಟೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ. ಡಿಸಿ ಕಚೇರಿಯಿಂದ ಚೆನ್ನಮ್ಮ ವೃತ್ತಕ್ಕೆ ತೆರಳಿ, ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು.
ರೈತರ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ : ಡಿ.ಕೆ.ಶಿವಕುಮಾರ್
ನಂತರ ನಗರದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಸುವರ್ಣಸೌಧದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ತಲುಪಲಿದ್ದು, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಕನ್ನಡ ಸಂಘಟನೆಯ ಪ್ರತಿಭಟನೆಯಲ್ಲಿ ರೈತ ಸಂಘಟನೆ ಮುಖಂಡರು ಭಾಗಿಯಾಗಲಿದ್ದಾರೆ.
ಸರ್ಕಾರ ಕೂಡಲೇ ಭೂಸ್ವಾಧೀನ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಬೆಳಗಾವಿ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ಒತ್ತಾಯಿಸಿದರು.








