ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರ್ನಾಟಕ ಬಂದ್‍ಗೆ ಉತ್ತಮ ಪ್ರತಿಕ್ರಿಯೆ: ರಾಜ್ಯಾದ್ಯಂತ ಪ್ರತಿಭಟನೆ, ಬಸ್ ಸಂಚಾರ ಸ್ಥಗಿತ

admin by admin
September 28, 2020
in Newsbeat, Politics, Samagra karnataka, ರಾಜ್ಯ
Karnataka bandh
Share on FacebookShare on TwitterShare on WhatsappShare on Telegram

Related posts

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

August 11, 2026
biscoff-swiggy-dineout-dm-a-lonely-cup-campaign-offers

August 11, 2026

ಬೆಂಗಳೂರು: ಭೂಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಖಂಡಿಸಿ 32 ರೈತ ಸಂಘಟನೆಗಳು ಇಂದು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್ ಸಂಚಾರ ವಿರಳವಾಗಿದ್ದು, ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿ ಕರ್ನಾಟಕ ಬಂದ್‍ಗೆ ಬೆಂಬಲ ನೀಡಲಾಗಿದೆ.
ಕೆ.ಆರ್ ಮಾರುಕಟ್ಟೆ, ಯಶವಂತಪುರದ ಎಪಿಎಂಸಿ ಮಾರುಕಟ್ಟೆ ಮುಚ್ಚದೇ ಇದ್ದರೂ ರೈತರು, ವ್ಯಾಪಾರಿಗಳಿಲ್ಲದೆ ಖಾಲಿ ಹೊಡೆಯುತ್ತಿವೆ. ಕೆ.ಆರ್ ಮಾರುಕಟ್ಟೆಯಲ್ಲಿ ವ್ಯಾಪಾರ ಬಂದ್ ಮಾಡಿಸಲು ಮುಂದಾದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ನಗರದಲ್ಲಿ ಬಂದ್‍ನ ವಾತಾವರಣ ಕಂಡು ಬರುತ್ತಿದ್ದು, ವಾಹನ ಸಂಚಾರ ವಿರಳವಾಗಿದೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಟಿ.ಎ ನಾರಾಯಣಗೌಡ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳ್ಳಂ ಬೆಳಿಗ್ಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ರೈಲು ತಡೆಗೆ ಮುಂದಾದರು. ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸುತ್ತಿದ್ದಂತೆ ನಾರಾಯಣಗೌಡ ಸೇರಿದಂತೆ ಹಲವು ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದೆ.
10ಗಂಟೆ ನಂತರ ವಿವಿಧ ರೈತಪರ, ಕನ್ನಡಪರ ಸೇರಿದಂತೆ ಹಲವು ಸಂಘಟನೆಗಳು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.
ರಾಜ್ಯಾದ್ಯಂತ ಬಹುತೇಕ ಜಿಲ್ಲಾ ಕೇಂದ್ರಗಳಲ್ಲೂ ಕರ್ನಾಟಕ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಡ್ಯ, ಮೈಸೂರು, ಧಾರವಾಡ, ದಾವಣಗೆರೆ, ಗದಗ, ಬಾಗಲಕೋಟೆ, ಕಲಬುರಗಿ, ಚಾಮರಾಜನಗರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜಿಲ್ಲಾ ಕೇಂದ್ರಗಳಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಟೈರ್‍ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಡ್ಯದಲ್ಲಿ ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಹಾಡು ಹೇಳಿ ಆಕ್ರೋಶ ವ್ಯಕ್ತಪಡಿಸಿದರೆ, ರಸ್ತೆಯಲ್ಲಿ ಉರುಳು ಸೇವೆ ಮಾಡಿ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.
ಹೀಗಾಗಿ ಮಂಡ್ಯ, ಧಾರವಾಡ, ಮೈಸೂರು, ಗದಗ ಬಹುತೇಕ ಜಿಲ್ಲೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಕರ್ನಾಟಕ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ.

Tags: bus bundditricts bundfamreskarave protestKarnataka bundPROTEST
ShareTweetSendShare
Join us on:

Related Posts

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram