ಧಾರವಾಡ: ರೈತ ವಿರೋಧಿ ಮಸೂದೆಗಳನ್ನು ಖಂಡಿಸಿ ಇಂದು ನಡೆಯುತ್ತಿರುವ ಕರ್ನಾಟಕ ಬಂದ್‍ಗೆ ಧಾರವಾಡದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಚಕಮಕಿಗೆ ಕಾರಣವಾಗಿದೆ.
ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಪ್ರತಿಭಟನೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳು ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆದಿದೆ.

ಕಾಂಗ್ರೆಸ್ ನಾಯಕರ ಜೊತೆ ಬಿಜೆಪಿ ಕಾರ್ಯಕರ್ತರು ಭಾಗಿಯಾದ ಹಿನ್ನೆಲೆಯಲ್ಲಿ ಈ ಚಕಮಕಿ ನಡೆದಿದೆ. ರೈತರು ಮತ್ತು ಕಾಂಗ್ರೆಸ್ ಮಾಧ್ಯಮ ವಕ್ತಾರ ಪಾಂಡುರಂಗ ನಡುವೆ ಮಾತಿನ ಚಕಮಕಿ ನಡೆದಿದ್ದು, ಕಾಂಗ್ರೆಸ್ ನಾಯಕರಿಗೆ ಪ್ರತಿಭಟನೆಯಲ್ಲಿ ಭಾಗಿಯಾಗಬೇಡಿ ಎಂದು ರೈತರ ಆಕ್ರೋಶ ವ್ಯಕ್ತಪಡಿಸಿದ ಘಟನೆಯು ನಡೆದಿದೆ.
ಯಾದಗಿರಿಯಲ್ಲಿ ಒತ್ತಾಯಪೂರ್ವಕವಾಗಿ ಬಂದ್
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಯಾದಗಿರಿ ನಗರದ ಪ್ರಮುಖ ರಸ್ತೆಯಲ್ಲಿನ ಅಂಗಡಿಗಳನ್ನು ಹೋರಾಟಗಾರರು ಬಲವಂತವಾಗಿ ಬಂದ್ ಮಾಡಿಸುತ್ತಿದ್ದಾರೆ. ಬೈಕ್ ಸವಾರಿಯ ಮೂಲಕ ಪ್ರಮುಖ ರಸ್ತೆಯಲ್ಲಿ ಹೋರಾಟಗಾರರ ಸಂಚಾರ ನಡೆಸುತ್ತಿದ್ದು, ಅಂಗಡಿ ತೆರೆದ ಮಾಲೀಕರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದು, ಅಂಗಡಿ ಮುಚ್ಚುವಂತೆ ಆಗ್ರಹಿಸುತ್ತಿದ್ದಾರೆ.









