ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ಸಹಿ ಸಂಗ್ರಹಿಸಲು ಮುಂದಾಗಿದೆ.
ಈ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಾಹಿತಿ ನೀಡಿದ್ದಾರೆ.
ರೈತರ ಹೋರಾಟಕ್ಕೆ ಬೆಂಬಲಿಸಿ ಕೆಪಿಸಿಸಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇದರಲ್ಲಿ ಭಾಗಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ, ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು.
ಇದನ್ನೂ ಓದಿ : ಬಿಎಸ್‍ವೈ ಡೋಂಗಿ ರೈತ ನಾಯಕ, ಕಾಂಗ್ರೆಸ್ ಹೋರಾಟಕ್ಕಾಗಿ ಹುಟ್ಟಿರುವ ಪಕ್ಷ : ಸಿದ್ದರಾಮಯ್ಯ
ಅಕ್ಟೋಬರ್ 10 ರಂದು ರೈತ ಸಮಾವೇಶ ನಡೆಸಲಾಗುವುದು.
ಅಕ್ಟೋಬರ್ 30ರೊಳಗೆ ಬಿಜೆಪಿ ನೀತಿ ವಿರುದ್ಧ ದೇಶಾದ್ಯಂತ ಜನರಿಂದ 2 ಕೋಟಿ ಸಹಿ ಸಂಗ್ರಹಿಸಿ ಅದನ್ನು ಎಐಸಿಸಿ ನಾಯಕಿ ಸೋನಿಯಾಗಾಂಧಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಮುಂದುವರಿದು ಮೋದಿ, ಬಿಎಸ್ ವೈ ವಿರುದ್ಧ ಕಿಡಿಕಾರಿದ ಸುರ್ಜೇವಾಲಾ, ಮೋದಿ ಹಾಗೂ ಯಡಿಯೂರಪ್ಪ ರೈತರ ಪರ ಕಾಯ್ದೆ ಜಾರಿಗೆ ತರುತ್ತಿದ್ದೇವೆ ಎಂದು ಹೇಳುತ್ತಿದ್ದರಾದರೂ ದೇಶದ ಎಲ್ಲ ರಾಜ್ಯಗಳಲ್ಲಿ ರೈತರ ಪ್ರತಿಭಟನೆ ನಡೆಯುತ್ತಿವೆ. ಪ್ರಧಾನಿ ಮೋದಿ ದೇಶದ ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದರು.








