ಬೆಂಗಳೂರು : ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲಿ ಹಕ್ಕಿಗಳಾಗಿರುವ ನಟಿ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿವನ್ನು ಎನ್ ಡಿಪಿಎಸ್ ಕೋರ್ಟ್ ವಜಾಗೊಳಿಸಿದೆ.
ಇದರೊಂದಿಗೆ ಮಾದಕ ನಟಿಯರಿಗೆ ಸದ್ಯಕ್ಕೆ ಜೈಲೇ ಗತಿಯಂತಾಗಿದೆ.
ಸೆಪ್ಟೆಂಬರ್ 21ರಂದು ಎನ್ ಡಿಪಿಎಸ್ ಕೋರ್ಟ್ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯ ವಿಚಾರಣೆಯನ್ನ ನಡೆಸಿತ್ತು.
ವಿಚಾರಣೆಯ ಬಳಿಕ ಆದೇಶವನ್ನು ನ್ಯಾಯಾಧೀಶರು ಕಾಯ್ದಿರಿಸಿದ್ದರು. ಇತ್ತ ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 24ರಂದು ನ್ಯಾಯಲಯ ಮುಂದೆ ಬಂದಿತ್ತು.
ವಾದ- ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ಇಂದಿಗೆ ಆದೇಶ ಕಾಯ್ದಿರಿಸಿದ್ದರು. ಇದನ್ನೂ ಓದಿ : ಕೇಂದ್ರ – ರಾಜ್ಯ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಸಹಿ ಸಂಗ್ರಹ
ಇಂದು ಮತ್ತೆ ನಟಿಯರ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಧೀಶ ಸೀನಪ್ಪ, ನಟಿ. ಸಂಜನಾ, ರಾಗಿಣಿ ಹಾಗೂ ಪ್ರಕರಣದ ಎ1 ಆರೋಪಿ ಶಿವಪ್ರಕಾಶ, ರಾಹುಲ್ ಮತ್ತು ವಿನಯ್ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದರು.
ಈ ಎಲ್ಲ ಬೆಳವಣಿಗೆಗಳ ನಡುವೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಹಿನ್ನೆಲೆ ಇಬ್ಬರು ನಟಿಯರನ್ನು ವಿಚಾರಣೆ ನಡೆಸಲು ನ್ಯಾಯಾಲಯದಿಂದ ಐದು ದಿನ ಅನುಮತಿ ಪಡೆದುಕೊಂಡಿತ್ತು.
ನ್ಯಾಯಾಲಯದ ಆದೇಶದ ಹಿನ್ನೆಲೆ ರಾಗಿಣಿ ಮತ್ತು ಸಂಜನಾ ಇಬ್ಬರು ಪರಪ್ಪನ ಅಗ್ರಹಾರದಲ್ಲಿಯೇ ಇಡಿ ವಿಚಾರಣೆ ಎದುರಿಸಿದ್ದಾರೆ.