ಉತ್ತರಪ್ರದೇಶ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸೆಪ್ಟೆಂಬರ್ 14ರಂದು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ದೆಹಲಿಯ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ 20 ವರ್ಷದ ಯುವತಿ ನಾಲ್ವರು ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದಳು.
ಯುವತಿಯ ಮೇಲೆ ಹಥ್ರಾಸ್‌ನ ಹಳ್ಳಿಯೊಂದರಲ್ಲಿ ದುಷ್ಕಮಿಳು ಅತ್ಯಾಚಾರ ನಡೆಸಿದ್ದರು.
ಗಂಭೀರ ಸ್ಥಿತಿಯಲ್ಲಿದ್ದ ಯುವತಿಯ ಮೈ ಮೇಲೆ ಹಲವು ಗಾಯವಾಗಿದ್ದವು.
ಎರೆಡು ವಾರಗಳಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಯುವತಿ ಇಂದು ಉಸಿರು ನಿಲ್ಲಿಸದ್ದಾಳೆ.
ಇನ್ನೂ ನಾಲ್ವರು ಆರೋಪಿಗಳನ್ನ ಅರೆಸ್ಟ್ ಮಾಡಲಾಗಿದೆ. ಇನ್ನೂ ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ತಮಗೆ ನೆರವು ನೀಡಲಿಲ್ಲ.
ಸಾರ್ವಜನಿಕರ ಆಕ್ರೋಶದ ಬಳಿಕ ನೆರವಿಗೆ ಬಂದರು ಎಂದು ಯುವತಿಯ ಕುಟುಂಬದವರು ಆರೋಪಿಸಿದ್ದಾರೆ.








