ಉತ್ತರಪ್ರದೇಶ : ನಾಳೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಐತಿಹಾಸಿಕ ತೀರ್ಪು ಹೊರಬರಲಿದೆ. ಶಕಗಳ ಹಳೆಯ ಕೇಸ್ ಗೆ ಉತ್ತರ ಪ್ರದೇಶದ ಲಖನೌನ ಸಿಬಿಐ ವಿಶೇಷ ನ್ಯಾಯಾಲಯದಿಂದ ನಾಳೆ ಅಂತಿಮ ತೀರ್ಪು ಪ್ರಕಟವಾಗಲಿದೆ.
ತೀರ್ಪು ಪ್ರಕಟವಾಗುವ ಸಂದರ್ಭದಲ್ಲಿ ಪ್ರಕರಣದ ಎಲ್ಲಾ 32 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಿಬಿಐ ಕೋರ್ಟ್ ಕಳೆದ ವಿಚಾರಣೆ ವೇಳೆಯೇ ನಿರ್ದೇಶಿಸಿತ್ತು.
ಅದರಂತೆ ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾಭಾರತಿ, ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್ ಸೇರಿದಂತೆ 32 ಮಂದಿ ನ್ಯಾಯಾಲಯದಲ್ಲಿ ಹಾಜರು ಇರಬೇಕಿದೆ.
ಇನ್ನೂ ತೀರ್ಪು ಪ್ರಕಟವಾಗುವ ವೇಳೆ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆ ಇದೆ.
ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ಮ ಹಾಗೂ ಅತೀ ಸೂಕ್ಮ ಪ್ರದೇಶಗಳು ಸೇರಿದಂತೆ ಎಲ್ಲೆಡೆ ಭಾರೀ ಭದ್ರತಾ ವ್ಯವಸ್ಥೆಗಳನ್ನ ಕೈಗೊಳ್ಲಲಾಗಿದೆ.
1992ರ ಡಿಸೆಂಬರ್ 6ರಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ವಿವಾದಿತ ರಾಮ ಜನ್ಮಭೂಮಿ ಪ್ರದೇಶದಲ್ಲಿದ್ದ ಬಾಬರಿ ಮಸೀದಿಯನ್ನು ಕರಸೇವಕರು ಧ್ವಂಸಗೊಳಿಸಿದ್ದರು.
ಈ ವೇಳೆ ಪ್ರಕರಣ ಸಂಬಂಧ ಸಲ್ಲಿಸಲಾಗಿದ್ದ ಚಾರ್ಜ್ ಶೀಟ್ ನಲ್ಲಿ ಮಸೀದಿ ಕೆಡವಲು ಅಡ್ವಾಣಿ ಮತ್ತು ಇತರರು ಸಂಚು ರೂಪಿಸಿದ್ದರು ಎಂದು ಉಲ್ಲೇಖಿಸಲಾಗಿತ್ತು.








