ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೊರೋನಾ ಸೋಂಕು
ಹೊಸದಿಲ್ಲಿ, ಸೆಪ್ಟೆಂಬರ್29: ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೋವಿಡ್ -19 ದೃಢಪಟ್ಟಿದೆ. ಆದರೆ ಕೊರೋನಾ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ವಿ.ಪಿ. ಕಚೇರಿ ಮಂಗಳವಾರ ರಾತ್ರಿ ಪ್ರಕಟಿಸಿದೆ. ನಾಯ್ಡು ವಾಡಿಕೆಯ ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದಾಗ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ಪತ್ತೆಯಾಗಿದೆ.
71 ವರ್ಷದ ಉಪರಾಷ್ಟ್ರಪತಿ ಆರೋಗ್ಯವಾಗಿದ್ದಾರೆ ಮತ್ತು ಲಕ್ಷಣರಹಿತರಾಗಿದ್ದಾರೆ. ಅವರ ಪತ್ನಿ ಸಹ ಪರೀಕ್ಷೆಗೆ ಒಳಗಾಗಿದ್ದು, ಅವರಿಗೆ ವರದಿಯು ನೆಗೆಟಿವ್ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಅವರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಇಂದು ಬೆಳಿಗ್ಗೆ ವಾಡಿಕೆಯ ಕೋವಿಡ್-19 ಪರೀಕ್ಷೆಗೆ ಒಳಗಾದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೋನಾ ದೃಢಪಟ್ಟಿದೆ. ಆದಾಗ್ಯೂ, ಅವರು ಲಕ್ಷಣರಹಿತ ಮತ್ತು ಆರೋಗ್ಯವಾಗಿದ್ದಾರೆ. ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಅವರ ಪತ್ನಿ ಶ್ರೀಮತಿ ಉಷಾ ನಾಯ್ಡು ಅವರನ್ನು ಪರೀಕ್ಷಿಸಲಾಗಿದ್ದು, ವರದಿಯು ನೆಗೆಟಿವ್ ಬಂದಿದೆ ಮತ್ತು ಅವರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ಉಪರಾಷ್ಟ್ರಪತಿ ಅವರ ಟ್ವಿಟರ್ ನಲ್ಲಿ ಟ್ವೀಟ್ ಮಾಡಲಾಗಿದೆ.
The Vice President of India who underwent a routine COVID-19 test today morning has been tested positive. He is however, asymptomatic and in good health. He has been advised home quarantine. His wife Smt. Usha Naidu has been tested negative and is in self-isolation.
— Vice-President of India (@VPIndia) September 29, 2020








