ಮೈಸೂರು: ಮೈಸೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನಾಲ್ವರು ಅಂತಾರಾಜ್ಯ ಗಾಂಜಾ ಸಾಗಣೆದಾರರನ್ನು ಬಂಧಿಸಿದ್ದಾರೆ.
ಕೇರಳ ಮೂಲದ ಮಹಮ್ಮದ್ ಶಫಿ, ಸಲೀಂ, ಪಫಿ, ಇಬ್ರಾಹಿಂ ಕುಟ್ಟಿ ಬಂಧಿತ ಆರೋಪಿಗಳು. ಬಂಧಿತರಿಂದ 86 ಕೆಜಿ 300 ಗ್ರಾಂ ಗಾಂಜಾ ಹಾಗೂ ಒಂದು ಬೊಲೆರೋ ಜೀಪ್ ವಶಕ್ಕೆ ಪಡೆಯಲಾಗಿದೆ.
ಆಂಧ್ರಪ್ರದೇಶದಿಂದ ಕರ್ನಾಟಕದ ಮೂಲಕ ಮೈಸೂರು ಮಾರ್ಗವಾಗಿ ಕೇರಳ ರಾಜ್ಯಕ್ಕೆ ಗಾಂಜಾ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಹೇಳಿದ್ದಾರೆ.
ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ
ನವದೆಹಲಿ: ದೆಹಲಿಯಲ್ಲಿ ನಡೆದ ಭಜನ್ ಕ್ಲಬ್ಬಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ ವಿಚಾರ ಈಗ ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ರಾಜಕೀಯ ಸಮರಕ್ಕೆ...








