ಪಾಕಿಸ್ತಾನ್: 17 ವರ್ಷದ ಹಿಂದೂ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿ ಬ್ಲಾಕ್ ಮೇಲ್ ಮಾಡ್ತಿದ್ದ ಹಿನ್ನೆಲೆ ಯುವತಿಯೊಬ್ಬಳು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಪಾಕಿಸ್ತಾನದ ಥರ್ಪಾರ್ಕರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
2019ರ ಜುಲೈ ತಿಂಗಳಿನಲ್ಲಿ 17 ವರ್ಷದ ಹಿಂದೂ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ಅತ್ಯಾಚಾರ ವೆಸಗಿದ ಆರೆೋಪಿಗಳು ಪದೇ ಪದೇ ಬ್ಲಾಕ್ ಮೇಲ್ ಮಾಡಿದ್ದಾರೆ.
ಉತ್ತರಪ್ರದೇಶದ 14 ವರ್ಷದ ಅಪ್ರಾಪ್ತೆ ಮೇಲೆ ನೆರೆಮನೆಯಾತನಿಂದಲೇ ಅತ್ಯಾಚಾರ
ಅತ್ಯಾಚಾರಿಗಳು ಪ್ರಭಾವಿ ವ್ಯಕ್ತಿಗಳಾಗಿದ್ದಾರೆಂದು ಹೇಳಲಾಗುತ್ತಿದ್ದು, ಈಗಾಗಲೇ ಪ್ರಕರಣ ಸಂಬಂಧ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ ಎನ್ನಲಾಗಿದೆ.
ಆರೋಪಿಗಳು ಯುವತಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಯುವತಿ ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾಳೆ.
ಘಟನೆ ಸಂಬಂಧ ಇದೀಗ ಪ್ರತಿಭಟನೆಗಳು ಭುಗಿಲೆದ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿವಿಧ ಸಂಘಟನೆಗಳು ಆಗ್ರಹಿಸಿವೆ.








