ADVERTISEMENT
Monday, November 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಉತ್ತರ ಪ್ರದೇಶದ ಹತ್ರಾಸ್‌ ನಲ್ಲಿ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದ ಪೋಲಿಸರು

admin by admin
October 1, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Police seized Rahul Gandhi
Share on FacebookShare on TwitterShare on WhatsappShare on Telegram

ಉತ್ತರ ಪ್ರದೇಶದ ಹತ್ರಾಸ್‌ ನಲ್ಲಿ ರಾಹುಲ್ ಗಾಂಧಿ ಅವರನ್ನು  ವಶಕ್ಕೆ ಪಡೆದ ಪೋಲಿಸರು

ಹತ್ರಾಸ್, ಅಕ್ಟೋಬರ್01: ಕಾಂಗ್ರೆಸ್ ಮುಖಂಡ ಮತ್ತು ಸಂಸದ ರಾಹುಲ್ ಗಾಂಧಿ ಅವರನ್ನು  ಉತ್ತರ ಪ್ರದೇಶದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

bgs-group-of-institutions-18th-founders-day-cultural-fest-2026-kengeri-nirmalanandanatha-swamiji

ಕೆಂಗೇರಿಯಲ್ಲಿ ನಡೆದ ಬಿಜಿಎಸ್ ಸಮೂಹ ಸಂಸ್ಥೆಗಳ 18ನೇ ಸಂಸ್ಥಾಪಕರ ದಿನಾಚರಣೆ ಹಾಗೂ ಸಾಂಸ್ಕೃತಿಕ ಉತ್ಸವ–

November 29, 2026
india-approves-6-new-urea-plants-worth-54000-crore-boosts-fertilizer-production-atmanirbhar-bharat

ರಸಗೊಬ್ಬರ ಉತ್ಪಾದನೆಯಲ್ಲಿ ಸ್ವಾವಲಂಬನೆಯತ್ತ ಭಾರತ ಮಹತ್ವದ ಹೆಜ್ಜೆ: ₹54 ಸಾವಿರ ಕೋಟಿ ಹೂಡಿಕೆಯಲ್ಲಿ 6 ಹೊಸ ಯೂರಿಯಾ ಘಟಕಗಳಿಗೆ ಅನುಮೋದನೆ

November 29, 2026

ಹತ್ರಾಸ್‌ಗೆ ತೆರಳುವಾಗ ದೆಹಲಿ ಮತ್ತು ಉತ್ತರ ಪ್ರದೇಶದ ನಡುವಿನ ಹೆದ್ದಾರಿಯಲ್ಲಿ ಮೆರವಣಿಗೆ ನಡೆಸುತ್ತಿದ್ದಾಗ ರಾಹುಲ್ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ‌

ನಾನು ಹತ್ರಾಸ್‌ ವರೆಗೆ ಕಾಲ್ನಡಿಗೆಯಲ್ಲಿ ಹೋಗಲು ಬಯಸುತ್ತೇನೆ. ನನ್ನನ್ನು ಯಾವ ಸೆಕ್ಷನ್ ಅಡಿಯಲ್ಲಿ ವಶಕ್ಕೆ ಪಡೆಯುತ್ತಿದ್ದೀರಿ ಎಂದು  ಪೊಲೀಸರನ್ನು ರಾಹುಲ್ ಪ್ರಶ್ನಿಸಿದ್ದಾರೆ. ಪೊಲೀಸರು, ಆದೇಶ ಉಲ್ಲಂಘನೆಗಾಗಿ ಸೆಕ್ಷನ್ 188 ಐಪಿಸಿ ಅಡಿಯಲ್ಲಿ ನಾವು ನಿಮ್ಮನ್ನು  ವಶಕ್ಕೆ ಪಡೆಯುತ್ತಿದ್ದೇವೆ ಎಂದು ಉತ್ತರಿಸಿದ್ದಾರೆ.
ಮಂಗಳವಾರ ಮೃತಪಟ್ಟ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ತೆರಳುತ್ತಿದ್ದರು ಎಂದು ವರದಿಗಳು ತಿಳಿಸಿವೆ.
ಯುಪಿ ಪೊಲೀಸರು ತಡರಾತ್ರಿ ಸಂತ್ರಸ್ತೆಯ ಶವಸಂಸ್ಕಾರ ಮಾಡಿರುವುದು ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.
ಪೊಲೀಸರು ನನ್ನನ್ನು ತಳ್ಳಿ, ಲಾಠಿಚಾರ್ಜ್ ಮಾಡಿದ್ದಾರೆ. ನಾನು ಕೇಳಲು ಬಯಸುತ್ತೇನೆ, ಮೋದಿ ಜಿ ಮಾತ್ರ ಈ ದೇಶದಲ್ಲಿ ಕಾಲ್ನಡಿಗೆಯಲ್ಲಿ ಹೋಗಲು ‌ ಸಾಧ್ಯವೇ? ಸಾಮಾನ್ಯ ವ್ಯಕ್ತಿ ನಡೆದು ಕೊಂಡು ಹೋಗಲು ಸಾಧ್ಯವಿಲ್ಲವೇ? ನಮ್ಮ ವಾಹನವನ್ನು ನಿಲ್ಲಿಸಲಾಯಿತು. ಹಾಗಾಗಿ ನಾವು ಕಾಲ್ನಡಿಗೆ ಪ್ರಾರಂಭಿಸಿದ್ದೆವು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ‌
ಉತ್ತರಪ್ರದೇಶ ಪೊಲೀಸರು ಅವರನ್ನು ಮುಂದಕ್ಕೆ ಹೋಗಲು ನಿರಾಕರಿಸಿದ ನಂತರ ಅವರು ನೂರಾರು ಬೆಂಬಲಿಗರೊಂದಿಗೆ ರಸ್ತೆಯಲ್ಲಿ ಕುಳಿತರು.

#WATCH Just now police pushed me, lathicharged me and threw me to the ground. I want to ask, can only Modi Ji walk in this country? Can't a normal person walk? Our vehicle was stopped, so we started walking: Congress leader Rahul Gandhi at Yamuna Expressway,on his way to #Hathras pic.twitter.com/nhu2iJ78y8

— ANI UP/Uttarakhand (@ANINewsUP) October 1, 2020

ದಲಿತ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹತ್ರಾಸ್‌ಗೆ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ವಾಹನಗಳನ್ನು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಗುರುವಾರ ನಿಲ್ಲಿಸಲಾಗಿದೆ ಎಂದು ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ಯಾರಿ ಚೌಕ್ ಬಳಿ ಬೆಂಗಾವಲು ನಿಲ್ಲಿಸಲಾಗಿದ್ದು, ಪಕ್ಷದ ಕಾರ್ಯಕರ್ತರು ಮತ್ತು ಹಿರಿಯ ಮುಖಂಡರು ಕಾಲ್ನಡಿಗೆಯಲ್ಲಿ ಮುಂದುವರಿಯುವಂತೆ ಪ್ರೇರೇಪಿಸಿದರು.
ಆದರೆ ಬಿಜೆಪಿ ಇದನ್ನು ನಿರಾಕರಿಸಿದ್ದು, ಕಾರಿನಲ್ಲಿ ಹೋಗಲು ಬಿಡದೇ ಇದ್ದಾಗ ರಾಹುಲ್ ಗಾಂಧಿ ನಡೆದುಕೊಂಡು ಹೋಗಲು ಯತ್ನ ನಡೆಸಿದರು.
ಆ ವೇಳೆ ತಳ್ಳಾಟ ನೂಕಾಟ ನಡೆದಿದ್ದು ರಾಹುಲ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ಹೇಳಿದೆ.

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

Tags: BJPBreaking-newsCongressCongress leaderLatestrahul gandhiUttarPradesh
ShareTweetSendShare
Join us on:

Related Posts

bgs-group-of-institutions-18th-founders-day-cultural-fest-2026-kengeri-nirmalanandanatha-swamiji

ಕೆಂಗೇರಿಯಲ್ಲಿ ನಡೆದ ಬಿಜಿಎಸ್ ಸಮೂಹ ಸಂಸ್ಥೆಗಳ 18ನೇ ಸಂಸ್ಥಾಪಕರ ದಿನಾಚರಣೆ ಹಾಗೂ ಸಾಂಸ್ಕೃತಿಕ ಉತ್ಸವ–

by admin
November 29, 2026
0

ಧಾರ್ಮಿಕ ಮೌಲ್ಯಗಳ ಜೊತೆಗೆ ವೈಜ್ಞಾನಿಕ ಮನೋಭಾವವನ್ನೂ ಮೈಗೂಡಿಸಿಕೊಂಡಿದ್ದ ಪರಮಪೂಜ್ಯ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರು ದೂರದೃಷ್ಟಿ ಮತ್ತು ಉದಾತ್ತ ಆಶಯಗಳೊಂದಿಗೆ ಬಿಜಿಎಸ್ ಸಂಸ್ಥೆಗೆ ಭದ್ರ ಬುನಾದಿ ಹಾಕಿದರು. ಅಂದು...

india-approves-6-new-urea-plants-worth-54000-crore-boosts-fertilizer-production-atmanirbhar-bharat

ರಸಗೊಬ್ಬರ ಉತ್ಪಾದನೆಯಲ್ಲಿ ಸ್ವಾವಲಂಬನೆಯತ್ತ ಭಾರತ ಮಹತ್ವದ ಹೆಜ್ಜೆ: ₹54 ಸಾವಿರ ಕೋಟಿ ಹೂಡಿಕೆಯಲ್ಲಿ 6 ಹೊಸ ಯೂರಿಯಾ ಘಟಕಗಳಿಗೆ ಅನುಮೋದನೆ

by admin
November 29, 2026
0

ವಾರ್ಷಿಕ 76.2 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಉತ್ಪಾದನಾ ಸಾಮರ್ಥ್ಯ; ಆಮದು ಅವಲಂಬನೆ ಕಡಿಮೆ ಮಾಡಲು ಮೋದಿ ಸರ್ಕಾರದ ಮಹತ್ವದ ನಿರ್ಧಾರ ನವದೆಹಲಿ: ರಸಗೊಬ್ಬರ ಉತ್ಪಾದನೆಯಲ್ಲಿ ಸ್ವದೇಶಿ...

r-ashoka-demands-promised-honorarium-for-asha-workers-slams-congress-on-delimitation-karnataka-politics

ಆಶಾ ಕಾರ್ಯಕರ್ತೆಯರಿಗೆ ಭರವಸೆ ನೀಡಿದಂತೆ ಗೌರವಧನ ನೀಡಲಿ, ಹೋರಾಟ ಮುಂದುವರಿಯಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
November 29, 2026
0

ಕ್ಷೇತ್ರ ಮರುವಿಂಗಡಣೆಗೆ ಇಂಡಿಯಾ ಮೈತ್ರಿಕೂಟದಲ್ಲೇ ಭಿನ್ನಾಭಿಪ್ರಾಯ, ಕಾಂಗ್ರೆಸ್‌ ಜೊತೆಗೆ ಯಾರೂ ಇಲ್ಲ ಬೆಂಗಳೂರು, ನವೆಂಬರ್‌ 29 ಆಶಾ ಕಾರ್ಯಕರ್ತೆಯರಿಗೆ ಕಾಂಗ್ರೆಸ್‌ ನೀಡಿದ ಭರವಸೆಯ ಪ್ರಕಾರವೇ ಗೌರವಧನ ನೀಡಬೇಕು....

india-approves-6-new-urea-plants-worth-54000-crore-boosts-fertilizer-production-atmanirbhar-bharat

ಕೋಳಿ ಸಾಕಾಣಿಕೆ ರೈತರ ಶೋಷಣೆ ಸಹಿಸಲ್ಲ; ಇಂಟಿಗ್ರೇಷನ್ ಕಂಪನಿಗಳ ದಬ್ಬಾಳಿಕೆಗೆ ಸರ್ಕಾರದ ಕುಮ್ಮಕ್ಕಿದೆಯೇ? – ಆರ್. ಅಶೋಕ

by admin
November 29, 2026
0

ಪ್ರತಿ ಕೆ.ಜಿಗೆ ₹10 ಕನಿಷ್ಠ ಸಾಕಾಣಿಕೆ ವೆಚ್ಚ ನೀಡಲು ಮೀನಾಮೇಷ; ರೈತರ ಮೇಲೆ ಹಲ್ಲೆ, ಬೆದರಿಕೆ ಆರೋಪ – ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕನ ಆಕ್ರೋಶ...

karnataka-sangha-qatar-felicitates-dr-vaibhav-tandale-at-community-farewell-doha

ಸಮುದಾಯ ಬೀಳ್ಕೊಡುಗೆ ಸಮಾರಂಭದಲ್ಲಿ ಡಾ. ವೈಭವ್ ತಾಂಡಲೆ ಅವರಿಗೆ ಕರ್ನಾಟಕ ಸಂಘ ಕತಾರ್ ವತಿಯಿಂದ ಸನ್ಮಾನ

by admin
November 29, 2026
0

ದೋಹಾ, ಕತಾರ್: ಕತಾರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಕೌನ್ಸಿಲರ್ (ಹೆಡ್ ಆಫ್ ಚಾನ್ಸೆರಿ) ಡಾ. ವೈಭವ್ ತಾಂಡಲೆ ಅವರು ತಮ್ಮ ರಾಜತಾಂತ್ರಿಕ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram