ADVERTISEMENT
Friday, August 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೆಎಸ್‌ಒಯು ಅಂತಿಮ ವರ್ಷದ ಬಿ.ಎ ವಿದ್ಯಾರ್ಥಿಗಳಿಗೆ ನಾಳೆ ಎರಡು ಪರೀಕ್ಷೆ

admin by admin
October 1, 2020
in Newsbeat, Samagra karnataka, ನ್ಯೂಸ್ ಬೀಟ್, ರಾಜ್ಯ
Two exams for KSOU final year
Share on FacebookShare on TwitterShare on WhatsappShare on Telegram

ಕೆಎಸ್‌ಒಯು ಅಂತಿಮ ವರ್ಷದ ಬಿ.ಎ ವಿದ್ಯಾರ್ಥಿಗಳಿಗೆ ನಾಳೆ ಎರಡು ಪರೀಕ್ಷೆ

ಮೈಸೂರು, ಅಕ್ಟೋಬರ್01: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‌ಒಯು) ಅಂತಿಮ ವರ್ಷದ ಬಿ.ಎ ವಿದ್ಯಾರ್ಥಿಗಳಿಗೆ ಒಂದೇ ದಿನ ಎರಡು ಪರೀಕ್ಷೆಗಳನ್ನು ನಿಗದಿ ಮಾಡಿದೆ.
ಅಕ್ಟೋಬರ್ 2ರಂದು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ 9ರಿಂದ 12ರವರೆಗೆ ಇತಿಹಾಸ ಮತ್ತು ಮಧ್ಯಾಹ್ನ 2ರಿಂದ 5ರವರೆಗೆ ಸಮಾಜಶಾಸ್ತ್ರ ಪರೀಕ್ಷೆ ನಿಗದಿ ಪಡೆಸಲಾಗಿದೆ. ಈ ಪರೀಕ್ಷೆಗಳು ಸೆಪ್ಟೆಂಬರ್ 25 ಮತ್ತು 28 ರಂದು ನಡೆಯಬೇಕಿತ್ತು. ಆದರೆ ಸೆಪ್ಟೆಂಬರ್ 25ರಂದು ಪ್ರತಿಭಟನೆ ಮತ್ತು 28ರಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.‌
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೆಎಸ್‌ಒಯು ಕುಲಪತಿ ಡಾ.ಎಸ್. ವಿದ್ಯಾಶಂಕರ್, ದೂರಶಿಕ್ಷಣದ ಮೂಲಕ ಪರೀಕ್ಷೆ ಬರೆಯುವ ಬಹುತೇಕ ವಿದ್ಯಾರ್ಥಿಗಳು ಬೇರೆ ಬೇರೆ ಉದ್ಯೋಗದಲ್ಲಿರುತ್ತಾರೆ.
ಎಲ್ಲರಿಗೂ ಅನುಕೂಲವಾಗುವಂತೆ ಪರೀಕ್ಷಾ ವೇಳಾಪಟ್ಟಿ ನಿಗದಿ ಮಾಡುವುದು ಸವಾಲಿನ ಕೆಲಸ. ಮೊದಲಿನ ವೇಳಾಪಟ್ಟಿಯನ್ನು ಎಲ್ಲ ಪರಿಶೀಲಿಸಿ ನಿಗದಿ ಮಾಡಲಾಗಿತ್ತು. ಆದರೆ ಬಂದ್‌ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಯಿತು ಎಂದು ತಿಳಿಸಿದ್ದಾರೆ.

Related posts

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

August 28, 2026
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

August 28, 2026

ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಕೂಡ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆ ಮುಂದೂಡಲ್ಪಟ್ಟ ಕಾರಣದಿಂದ ಅವರಿಗೂ ತೊಂದರೆಯಾಗಿದೆ. ಅಕ್ಟೋಬರ್ 7ರಂದು ಅವರು ಕರ್ತವ್ಯಕ್ಕೆ ತೆರಳಬೇಕಾಗಿದ್ದು, ಬೇಗನೇ ಪರೀಕ್ಷೆ ಪೂರ್ಣಗೊಳಿಸಿ ಎಂದು ಮನವಿ ಮಾಡಿದ್ದಾರೆ. ‌ ಅವರಷ್ಟೇ ಅಲ್ಲ ಇನ್ನೂ ಹಲವಾರು ಅಭ್ಯರ್ಥಿಗಳು ಪರೀಕ್ಷೆಗಳನ್ನು ಬೇಗ ಪೂರ್ಣಗೊಳಿಸಿ ಎಂದು ಮನವಿ ಮಾಡಿದ್ದಾರೆ ಎಂದು ಕೆಎಸ್‌ಒಯು ಕುಲಪತಿ ತಿಳಿಸಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಅನೇಕರಿಗೆ ಎರಡನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಅದೇ ಮಾನ
ದಂಡವನ್ನು ಅನುಸರಿಸಿ, ಅಕ್ಟೋಬರ್ 2ರಂದು ಎರಡು ಪತ್ರಿಕೆಗಳನ್ನು ಉತ್ತರಿಸಲಾಗದವರಿಗೆ ಮತ್ತೊಂದು ಅವಕಾಶ ನೀಡಲಾಗುತ್ತದೆ. ಒಂದು ಪತ್ರಿಕೆಗೆ ಅವರು ಗೈರು ಹಾಜರಾದದೆ, ಮತ್ತೊಂದು ದಿನ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 2ರಂದು ಬೇರೆ ಪರೀಕ್ಷೆಗೆ ಹಾಜರಾದ ಅಥವಾ ಎರಡು ಪತ್ರಿಕೆ ಇದ್ದ ಬಗ್ಗೆಗಿನ ಪ್ರವೇಶ ಪತ್ರವನ್ನು ತೋರಿಸಿದರೆ ಅವರಿಗೆ ಮತ್ತೊಂದು ಅವಕಾಶ ನೀಡಲಾಗುವುದು ಎಂದು ಕುಲಪತಿ ಅವರು ಸ್ಪಷ್ಟಪಡಿಸಿದ್ದಾರೆ.

Tags: final year BA studentskarnatakaKarnataka State Open UniversityKSOUMysoreOpen university
ShareTweetSendShare
Join us on:

Related Posts

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

by Shwetha
August 28, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿದ್ದರಾಮಯ್ಯ ಮತ್ತು ಜಿ ಪರಮೇಶ್ವರ ಅವರ ನಡುವಿನ ಸಂಬಂಧದ ಬಗ್ಗೆ ಹೊಸ ಚರ್ಚೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೆ ಅಧಿಕಾರ...

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

by Shwetha
August 28, 2026
0

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆಗಳನ್ನು...

ನೇಪಾಳದಲ್ಲಿ ಭೀಕರ ಪ್ರವಾಹ; ಕೈಲಾಸ ಮಾನಸ ಸರೋವರ ಯಾತ್ರೆಯ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆ

ನೇಪಾಳದಲ್ಲಿ ಭೀಕರ ಪ್ರವಾಹ; ಕೈಲಾಸ ಮಾನಸ ಸರೋವರ ಯಾತ್ರೆಯ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆ

by Shwetha
August 28, 2026
0

ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ 133 ಭಾರತೀಯರು ಹಾಗೂ 37 ಅನಿವಾಸಿ ಭಾರತೀಯರು ಸೇರಿದಂತೆ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು...

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

by Shwetha
August 28, 2026
0

ಮಾಸ್ ಮಹಾರಾಜ ರವಿ ತೇಜ ಅಭಿನಯದ ಇತ್ತೀಚಿನ ಚಿತ್ರ ಇರುಮುಡಿ ಪ್ರೇಕ್ಷಕರ ಮನ ಗೆಲ್ಲುವುದರ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ...

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ:  ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

by Shwetha
August 28, 2026
0

ಬೆಂಗಳೂರು: ಆರ್‌ಎಸ್‌ಎಸ್ ನೊಂದಣಿ ವಿಷಯವಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಮತ್ತು ಹಾಕಿದ್ದ ಸವಾಲಿಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿ ತಿರುಗೇಟು ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram