ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಮುಂಬೈ ಬ್ಯಾಟ್ಸ್ ಮನ್ ಗಳ ರೌದ್ರಾವತಾರ.. ಪಂಜಾಬ್ ಗೆ 48 ರನ್ ಗಳ ಸೋಲು

admin by admin
October 2, 2020
in IPL 2020, Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮುಂಬೈ ತಂಡದ ಬ್ಯಾಟ್ಸ್ ಮನ್ ರೌದ್ರಾವತಾರ… ಶಿಸ್ತುಬದ್ಧ ಬೌಲಿಂಗ್ ದಾಳಿ, ಸಂಘಟಿತ ಹೋರಾಟ. ಪಂಜಾಬ್ ಪೆವೀಲಿಯನ್ ಪರೇಡ್ ಇದು  ನಿನ್ನೆ ಅಬುಧಾಬಿಯಲ್ಲಿ ನಡೆದ ಐಪಿಎಲ್ ನ 13ನೇ ಪಂದ್ಯದ ಹೈಲೆಟ್ಸ್..

ಹೌದು…! ಅಬುಧಾಬಿಯ ಕ್ರಿಕೆಟ್ ಮೈದಾನದಲ್ಲಿ ಐಪಿಎಲ್ 2020ರ ಸೀಜನ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲುವಿನ ಹಾದಿಗೆ ಮರಳಿದೆ.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಕಿಂಗ್ಸ್ ಇಲೆವೆನ್ ತಂಡದ ವಿರುದ್ಧ 48 ರನ್ ಗಳ ಗೆಲುವು ಪಡೆದಿದೆ. ಆ ಮೂಲಕ ಮುಂಬೈ ತಂಡ ಟೂರ್ನಿಯಲ್ಲಿ 2ನೇ ಗೆಲುವು ಪಡೆದುಕೊಂಡಿದೆ.

ಇದನ್ನೂ ಓದಿ : ಕೊರೋನಾ ಸಕ್ರಿಯ ಪ್ರಕರಣಗಳ ಪೈಕಿ ಮೂರನೇ ಸ್ಥಾನಕ್ಕೆ ಏರಿದ ಕೇರಳ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ, ನಾಯಕ ರೋಹಿತ್ ಶರ್ಮಾರ ಅರ್ಧ ಶತಕ ಹಾಗೂ ಹಾರ್ಧಿಕ್ ಪಾಂಡ್ಯ, ಪೊಲ್ಲಾರ್ಡ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 191 ರನ್ ಗಳನ್ನು ಪೇರಿಸಿತು.

ಅದರಲ್ಲೂ ಕೊನೆಯ 6 ಓವರ್ ಗಳಲ್ಲಿ ಪಂಜಾಬ್ ಬೌಲರ್ ಗಳನ್ನು ಚೆಂಡಾಡಿದ ಮುಂಬೈ ದಾಂಡಿಗರು, 36 ಎಸೆತಗಳಲ್ಲಿ 104 ರನ್ ಗಳನ್ನು ಚಚ್ಚಿ ಬೀಸಾಕಿದರು.

ರೋಹಿತ್ ಶರ್ಮಾ 45 ಎಸೆತಗಳಲ್ಲಿ 8 ಬೌಂಡರಿ, 3 ಸಿಕ್ಸರ್ ಗಳಿಂದ 70 ರನ್ ಗಳಿಸಿದರೆ, ಹಾರ್ದಿಕ್ 11 ಎಸೆತಗಳಲ್ಲಿ 30 ರನ್ ಹಾಗೂ ಪೊಲ್ಲಾರ್ಡ್ 47 ರನ್ ಸಿಡಿಸಿದರು.

IPL2020 KINGS XI PUNJAB VS MUMBAI INDIANS
MUMBAI INDIANS

ಮುಂಬೈ ನೀಡಿದ್ದ 192 ರನ್ ಬೃಹತ್ ಮೊತ್ತವನ್ನು ಬೆನ್ನಟ್ಟಿದ್ದ ಪಂಜಾಬ್ ತಂಡದ ನಿಗದಿತ 20 ಓವರ್ ಗಳಲ್ಲಿ ಮುಂಬೈ ಇಂಡಿಯನ್ಸ್ ಬೌಲರ್ ಗಳ ಶಿಸ್ತು ಬದ್ಧ ಬೌಲಿಂಗ್ ದಾಳಿಯಿಂದ 8 ವಿಕೆಟ್ ನಷ್ಟಕ್ಕೆ 143 ರನ್ ಗಳಷ್ಟೆ ಗಳಿಸಲು ಶಕ್ತವಾಯಿತು.

192 ರನ್ ಗುರಿಯನ್ನು ಬೆನ್ನಟ್ಟಿದ ಕಿಂಗ್ಸ್ ಇಲೆವೆನ್ ಪಂಜಾಬ್ ಗೆ ನಾಯಕ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಸಾಲಿಡ್ ಓಪನಿಂಗ್ ನೀಡಿದರು.

ಬಿರುಸಿನ ಬ್ಯಾಟಿಂಗ್ ಆರಂಭ ಪಡೆದ ಪಂಜಾಬ್ ಮೊದಲ 4 ಓವರ್ ಗಳಲ್ಲಿ 37 ರನ್ ರನ್ ಗಳನ್ನು ಗಳಿಸಿತ್ತು.

ಈ ವೇಳೆ ದಾಳಿಗೆ ಇಳಿದ ಬೂಮ್ ಬೂಮ್ ಬೂಮ್ರಾ 18 ಎಸೆತಗಳಲ್ಲಿ 25 ರನ್ ಗಳಿಸಿದ್ದ ಮಯಾಂಕ್ ಅಗರ್ ವಾಲ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು.

ಮಯಾಂಕ್ ಪೆವಿಲಿಯನ್ ಹಾದಿ ತುಳಿಯುತ್ತಿದಂತೆ ಕ್ರಿಸ್ ಬಂದ ಕರುಣ್ ನಾಯರ್ ರನ್ನು ಕೃನಾಲ್ ಪಾಂಡ್ಯ ಶೂನ್ಯಕ್ಕೆ ಔಟ್ ಮಾಡುವ ಮೂಲಕ ಪಂಜಾಬ್ ತಂಡಕ್ಕೆ ಶಾಕ್ ನೀಡಿದರು.

ಇತ್ತ ವಿಕೆಟ್ ಉರುಳುತ್ತಿದ್ದರೂ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದ ನಾಯಕ ಕೆ.ಎಲ್ ರಾಹುಲ್, 17 ರನ್ ಗಳಿಸಿದ್ದ ವೇಳೆ ರಾಹುಲ್ ಚಹರ್ ಓವರಿನ ಮೊದಲ ಎಸೆತದಲ್ಲೇ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

ಇದರೊಂದಿಗೆ ಪಂಜಾಬ್ ತಂಡದ ರನ್ ವೇಗಕ್ಕೆ ಕಡಿವಾಣ ಹಾಕಲು ಮುಂಬೈ ಯಶಸ್ವಿಯಾಯಿತು.

Rahul KL Rahul Kings 11 Panjab
Rahul

ಇದರಿಂದ ಪಂಜಾಬ್ ತಂಡ ಅಂತಿಮ 50 ಎಸೆತಗಳಲ್ಲಿ 100 ರನ್ ಗಳಿಸುವ ಒತ್ತಡಕ್ಕೆ ಸಿಲುಕಿತ್ತು. ಸಂಕಷ್ಟದಲ್ಲಿದ್ದ ತಂಡಕ್ಕೆ ಬಿರುಸಿನ ಬ್ಯಾಟಿಂಗ್ ನಿಂದ ನೆರವಾಗುತ್ತಿದ್ದ ಪೊರನ್ ವಿಕೆಟ್ ಪಡೆಯುವಲ್ಲಿ ಜೇಮ್ಸ್ ಪ್ಯಾಟಿನ್ಸನ್ ಯಶಸ್ವಿಯಾದರು.

27 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ನೆರವಿನಿಂದ 44 ರನ್ ಗಳಿಸಿದ್ದ ಪೊರನ್, ಡಿ ಕಾಕ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ಇದರ ಬೆನ್ನಲ್ಲೇ ದಾಳಿ ನಡೆಸಿದ ಚಹರ್ ಬೌಲಿಂಗ್ ನಲ್ಲಿ 11 ರನ್ ಗಳಿಸಿದ್ದ ಮ್ಯಾಕ್ಸ್ ವೆಲ್ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ನಿಶಮ್ (7 ರನ್)ರನ್ನು ಬಂದಷ್ಟೇ ವೇಗದಲ್ಲಿ ಬುಮ್ರಾ ಪೆವಿಲಿಯನ್ ಗೆ ವಾಪಸ್ ಕಳುಹಿಸಿದರು.

ಆ ಬಳಿಕ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದ ಪಂಜಾಬ್ ಬ್ಯಾಟ್ಸ್ ಮನ್ ಗಳನ್ನು ಮುಂಬೈ ಬೌಲಿಂಗ್ ಪಡೆ ಸುಲಭವಾಗಿ ಕಟ್ಟಿಹಾಕಲು ಯಶಸ್ವಿಯಾಯಿತು.

ಅಂತಿಮವಾಗಿ ಕಿಂಗ್ಸ್ ಇಲೆವೆನ್ ಪಂಜಾನ್ 8 ವಿಕೆಟ್ ನಷ್ಟದೊಂದಿಗೆ 143 ರನ್ ಗಳಿಸಿ ಸೋಲುಂಡಿತು.

Tags: IPLipl2020Kings XI Punjabmimumbai indiansRCB
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram