ಬೆಳಗಾವಿ : ಕಾಗವಾಡ ಕ್ಷೇತ್ರದ ಬಿಜೆಪಿ ಶಾಸಕ, ಜವಳಿ ಖಾತೆ ಸಚಿವ ಶ್ರೀಮಂತ ಪಾಟೀಲರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.
ಅವರಿಗೆ ಯಾವುದೇ ರೋಗದ ಗುಣಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಚಿವ ಶ್ರೀಮಂತ ಪಾಟೀಲ ಅವರು ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ವರಿಷ್ಠರಿಂದಲೇ ಪಕ್ಷದ ಅಲಿಖಿತ ನಿಯಮ ಉಲ್ಲಂಘನೆ : ಬಿಎಸ್ ವೈಗೆ ಸಿ.ಟಿ.ರವಿ ಟಾಂಗ್
ಇಂದು ನಾನು ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ.
ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ, ನಿಮ್ಮ ಸೇವೆಗೆ ಮರಳುತ್ತೇನೆ ಎಂದು ಬರೆದುಕೊಂಡಿದ್ದಾರೆ.








