ಬರೋಬ್ಬರಿ 6 ತಿಂಗಳುಗಳ ಬಳಿಕ ಮಂತ್ರಾಲಯದ ರಾಯರ ಮಠದಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಅದರಂತೆ ಇಂದು ಮಧ್ಯಾಹ್ನ 1 ಗಂಟೆಗೆ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಠದ ಮಹಾದ್ವಾರವನ್ನು ತೆರೆದರು.
ಮಠದಲ್ಲಿ ಭಕ್ತರು ಅಂತರ ಕಾಯ್ದುಕೊಂಡು ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.
ಇನ್ನೂ ತಿಂಗಳುಗಳ ಬಳಿಕ ಮಠದ ಬಾಗಿಲು ತೆರೆದ ಹಿನ್ನಲೆಯಲ್ಲಿ ಮಠದ ಆವರಣವನ್ನು ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು.
ಮಾರ್ಚ್‌ನಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ ಪರಿಣಾಮ ಕೊರೊನಾ ನಿರ್ಮೂಲನೆಗೆ ಮಠಕ್ಕೆ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು.
ಇದೀಗ ತಿಂಗಳುಗಳ ಬಳಿಕ ಮತ್ತೆ ಭಕ್ತರಿಗೆ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಅನುವುಮಾಡಿಕೊಡಲಾಗಿದೆ.




![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)


