ಬೆಳಗಾವಿ: ಜಿಲ್ಲೆಯ ಸವದತ್ತಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಬಲಿಯಾಗಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯ ಮೊರಬ ಗ್ರಾಮದ ಜಮೀನಿನಲ್ಲಿ ಕೂಲಿ ಕೆಲಸ ಮುಗಿಸಿ ಊರಿನ ಕಡೆಗೆ ಕೂಲಿ ಕಾರ್ಮಿಕರನ್ನು ತುಂಬಿಕೊಂಡು ಹೊರಟಿದ್ದ ಬೊಲೆರೋಗೆ, ಸವದತ್ತಿ ಕಡೆಗೆ ಬರುತ್ತಿದ್ದ ಟಾಟಾ ಏಸ್ ಆಟೋ ಡಿಕ್ಕಿ ಹೊಡೆದಿದೆ.
ಸ್ಥಳದಲ್ಲೇ ಕಾರು ಚಾಲಕ ಹಾಗೂ ಐವರು ಮಹಿಳೆಯರು ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲ ರಾಮದುರ್ಗ ತಾಲೂಕಿನ ಕೆಂಚನೂರು, ಚುಂಚನೂರ ಗ್ರಾಮದವರು ಎಂದು ಹೇಳಲಾಗಿದೆ.
ಅಪಘಾತದ ರಭಸಕ್ಕೆ ಎರಡೂ ವಾಹನಗಳು ನಜ್ಜು ಗುಜ್ಜಾಗಿದ್ದು, ಮೂವರ ಮೃತದೇಹಗಳ ಗುರುತು ಪತ್ತೆಯಾಗಿದೆ. ಚುಂಚನೂರ ಗ್ರಾಮದ ಯಲ್ಲವ್ವ (65), ಪಾರವ್ವ( 35), ರುಕ್ಮವ್ವ (35) ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಅಮರನಾಥ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
175 ತಾಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಿ, ರೈತರ ಸಾಲ ಮನ್ನಾ ಮಾಡಿ, ಹಣ ಬಿಡುಗಡೆ ಬಗ್ಗೆ ನಿಖರವಾಗಿ ತಿಳಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
ಸಚಿವ ನಾಗೇಂದ್ರ ರಾಜೀನಾಮೆ ನೀಡುವುದು ಖಚಿತ, ನಮ್ಮ ಹೋರಾಟಕ್ಕೆ ಬೆಲೆ ಸಿಗಲಿದೆ ಬೆಂಗಳೂರು, ರಾಜ್ಯ ಸರ್ಕಾರ ಕಾಟಾಚಾರಕ್ಕೆ ಬರಗಾಲ ಘೋಷಣೆ ಮಾಡಿದೆ. ಆದರೆ 175 ತಾಲೂಕುಗಳಲ್ಲಿ ಬರ...








