ಲಕ್ನೋ : ಯೋಗಿ ನಾಡು ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮುಂದುವರಿದಿದೆ.
ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.
ಇದರ ಮಧ್ಯೆ ಉತ್ತರಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯ ಹಳ್ಳಿಯಲ್ಲಿ ಅಪ್ರಾಪ್ತೆಯ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸೆಪ್ಟೆಂಬರ್ 26 ರಂದು ಕಾನ್ಪುರ್ ದೇಹತ್ ಜಿಲ್ಲೆಯ ಹಳ್ಳಿಯಲ್ಲಿ 15 ವರ್ಷದ ಹುಡುಗಿ ನಾಪತ್ತೆಯಾಗಿದ್ದಳು.
ಈಗ ಆಕೆಯ ಶವ ಜಮೀನು ಒಂದರಲ್ಲಿ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇದನ್ನೂ ಓದಿ : ಕೊಚ್ಚಿಯಲ್ಲಿ ಗ್ಲೈಡರ್ ಪತನ : ಇಬ್ಬರು ಅಧಿಕಾರಿಗಳು ಸಾವು
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಡುಗಿಯ ಕುಟುಂಬದ ಇಬ್ಬರು ಸಂಬಂಧಿಕರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಮಾಡುವ ಮೊದಲು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅಪ್ರಾಪ್ತೆಯಪೋಷಕರು ಆರೋಪಿಸಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರ ತಂಡ ಹೋಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಅಪ್ರಾಪ್ತೆಯ ಮೃತದೇಹದ ಭಾಗಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.








