ಸಾಹಸಿ ಪ್ರವಾಸಿ ಪ್ರಿಯರ ಹಾಟ್ ಸ್ಪಾಟ್ ಎಂದರೇ ಅದು ನಮ್ಮ ಕರ್ನಾಟಕದ ದಾಂಡೇಲಿ.. ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಪಶ್ಚಿಮ ಘಟ್ಟಗಳ ಸುಂದರ ಹಸಿರಿನ ಮಡಿಲಲ್ಲಿರುವ ಸುಂದರ ತಾಣ ದಾಂಡೇಲಿಗೆ ನಿತ್ಯ ಸಾವಿರಾರು ಪ್ರಾಯಾಣಿಕರು ವಿಸಿಟ್ ಮಾಡಿ ಪ್ರಕೃತಿಯ ಸೌಂದರ್ಯ ಕಣ್ತುಂಬಿಕೊಳ್ತಾರೆ. ಪ್ರಕೃತಿಯ ಮೋಹಕ ನೋಟದ ಜೊತೆಗೆ ಸಾಹಸ ಅಂದ್ರೆ ಅಡ್ವೆಂಚರ್ ಎರೆಡೂ ಈ ತಾಣದಲ್ಲಿ ಪ್ರವಾಸಿಗರನ್ನು ರೋಮಾಂಚನಗೊಳಿಸುತ್ತೆ. ಪ್ರವಾಸಿ ಸ್ಥಾನಗಳಲ್ಲಿ ಆಕರ್ಷಕ ಹಾಗು ಸಾಹಸಮಯ ದಾಂಡೇಲಿ ಪಟ್ಟಣ.
ದಾಂಡೇಲಿ ವಿದ್ಯಾಭ್ಯಾಸಕ್ಕಾಗಿ ಮತ್ತು ಔದ್ಯೋಗಿಕವಾಗಿಯೂ ಹೆಸರಾಗಿದೆ. ದಾಂಡೇಲಿ ಪಣ್ಣವನ್ನು ಪೇಪರ್ ಕಾರ್ಖಾನೆ ಆವರಿಸಿಕೊಂಡಿದೆ. ಹಾಲ್ನೊರೆಯಂತೆ ಹರಿಯುವ ನೀರಿನಲ್ಲಿ ಸಾಹಸ ಜಲಕ್ರೀಡೆ ರಾಫ್ಟಿಂಗ್ ಗಾಗಿ ಭಾರತದಲ್ಲೇ ದಾಂಡೇಲಿ ಪ್ರಸಿದ್ಧಿ ಹೊಂದಿದೆ. ದಟ್ಟ ಡಂಡಕಾರಣ್ಯ ದಾಂಡೇಲಿಯನ್ನು ಆವರಿಸಿರುವ ಕಾರಣಕ್ಕೇನೆ ಇದಕ್ಕೆ ದಾಂಡೇಲಿ ಎಂಬ ಹೆಸರು ಬಂದಿದೆ ಎಂಬ ಮಾತಿದೆ.
ದಾಂಡೇಲಿಯು ರಾಜ್ಯದಲ್ಲಿಯೇ ಎರಡನೇ ದೊಡ್ಡ ವನ್ಯಜೀವಿಧಾಮವೆಂದು ಹೆಸರಾಗಿದೆ. ಭಾರೀ ಸಂಖ್ಯೆಯ ಪ್ರವಾಸಿಗರು ದಾಂಡೇಲಿಗೆ ಭೇಟಿ ನೀಡುತ್ತಾರೆ. ದಾಂಡೇಲಿ ವನ್ಯಜೀವಿಧಾಮವು ಕಾಳಿ ನದಿಯ ಉಪನದಿಗಳಾದ ಕನೇರಿ ಮತ್ತು ನಾಗಝರಿಯೊಂದಿಗೆ ದಟ್ಟವಾದ ಅರಣ್ಯದಿಂದ ಕೂಡಿದೆ. ಈ ವನ್ಯಜೀವಿ ಧಾಮವು ಹುಲಿ, ಚಿರತೆ, ಕಾಡಾನೆ, ಜಿಂಕೆ, ಕಾಡೆಮ್ಮೆ, ಕಾಡುಕೋಡಣ, ಕರಡಿ, ನರಿ, ಜೋಳ, ಲಂಗೂರ ಸೇರಿದಂತೆ ಸುಮಾರು 300 ಕ್ಕೂ ಹೆಚ್ಚು ಪಕ್ಷಿಗಳಿಗೆ ಆಶ್ರಯ ನೀಡಿದೆ. ಇಲ್ಲಿನ ಕಾಳಿ ನದಿಯಲ್ಲಿ ಸಾಹಸ ಜಲಕ್ರೀಡೆಗಳಾದ ರಾಫ್ಟಿಂಗ್, ಕೇಯಕಿಂಗ್, ಕನೋಯಿಂಗ್ ಸೇರಿದಂತೆ ಮುಂತಾದ ಕ್ರೀಡೆಗಳನ್ನು ಆಡಿ ಎಂಜಾಯ್ ಮಾಡಬುಹುದು.
ಇದನ್ನೂ ಓದಿ : ಮಲೆನಾಡು ಚಿಕ್ಕಮಗಳೂರಿನಲ್ಲಿ ನೋಡಲೇಬೇಕಾದ ತಾಣಗಳು..!
ಇನ್ನೂ ಗುಡ್ಡಗಾಡು ಸೈಕಲ್ ರೈಡಿಂಗ್, ಟ್ರಕಿಂಗ್, ಬೋಟಿಂಗ್, ಮೀನುಗಾರಿಕೆ, ಪಕ್ಷಿ ವೀಕ್ಷಣೆ ಮಾಡಿ ಪ್ರವಾಸಿಗರು ಪ್ರಕೃತಿಯ ವಿಶೇಷ ಅನುಭವವನ್ನ ಸವಿಯಬಹುದು. ಪಶ್ಚಿಮ ಘಟ್ಟಗಳ ಸರಹದ್ದಿನ ಕಾಳಿ ನದಿ ದಂಡೆಯಲ್ಲಿರುವ ದಾಂಡೇಲಿ ಪಟ್ಟಣವು ಸಮುದ್ರ ಮಟ್ಟದಿಂದ 1551 ಅಡಿಗಳಷ್ಟು ಎತ್ತರವಿದೆ. ಇನ್ನೂ ದಾಂಡೇಲಿಗೆ ಹತ್ತಿರದಲ್ಲಿ ಇನ್ನೂ ಹಲವು ಪ್ರೇಕ್ಷಣೀಯ ಸ್ಥಳಗಳು ಇವೆ.. ಪ್ರಖ್ಯಾತ ಧಾರ್ಮಿಕ ಸ್ಥಳ ಉಳವಿ, ಸೈಕ್ಸ್ ಪಾಯಿಂಟ್, ಸುಪಾ ಡ್ಯಾಮ್, ಸಿಂಥೇರಿ ರಾಕ್ಸ್ ಹೀಗೆ ಹಲವು ಪ್ರೇಕ್ಷಣೀಯ ಸ್ಥಳಗಳು ಪ್ರವಾಸಿಗರನ್ನು ಆಕರ್ಷಿಸುತ್ತೆ.








