ಬೆಂಗಳೂರು : ಆರ್ ಆರ್ ನಗರ, ಶಿರಾ ಉಪಚುನಾವಣೆಯಲ್ಲಿ ಬಿಜೆಪಿ (BJP) ಮತ್ತು ಜೆಡಿಎಸ್ (JDS) ಪಕ್ಷಗಳು ಮೈತ್ರಿ ಮಾಡಿಕೊಂಡಿವೆ ಎಂಬ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ” ಉಪ ಚುನಾವಣೆ ಸಂದರ್ಭದಲ್ಲಿ ಬಿಜೆಪಿ (BJP) ಮತ್ತು ಜೆಡಿ(ಎಸ್) (JDS) ಒಳಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸುವ ಸಿದ್ದರಾಮಯ್ಯ ಅವರ ಬಳಿ ಇದಕ್ಕೆ ಯಾವ ಸಾಕ್ಷಿ ಇದೆ ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್.ಡಿ. ಕುಮಾರಸ್ವಾಮಿ, ವೈಯಕ್ತಿಕ ನೆಲೆಯಲ್ಲಿ ಸ್ನೇಹ ವಿಶ್ವಾಸವೇ ಬೇರೆ, ಆದರೆ, ಉಪ ಚುನಾವಣೆ ಘೋಷಣೆಯಾದ ನಂತರ ಪುತ್ರನ ಸ್ನೇಹಿತನನ್ನು ದಾಳವಾಗಿ ಬಳಸಿಕೊಂಡು ಮತ್ತೊಂದು ಪಕ್ಷಕ್ಕೆ ಕಳುಹಿಸುವ ಜಾಯಮಾನ ನನ್ನದಲ್ಲ.
ಉಪ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿ(ಎಸ್) ಒಳಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸುವ ಸಿದ್ದರಾಮಯ್ಯ ಅವರ ಬಳಿ ಇದಕ್ಕೆ ಯಾವ ಸಾಕ್ಷಿ ಇದೆ ? “ದೋಸ್ತಿ ದಾಳ” ವನ್ನು ರಾಜಕೀಯವಾಗಿ ಬಳಸಿಕೊಂಡು ತಾವು ಬೆಳೆದ ಪಕ್ಷಗಳಿಗೆ ಕುತ್ತು ತರುವ ಚಾಳಿ ಅವರಿಗೆ ಹೊಸತೇನಲ್ಲ ಎಂದು ಸಿದ್ದರಾಮಯ್ಯ ಅವರಿಗೆ ತಿವಿದಿದ್ದಾರೆ.
ಇದನ್ನೂ ಓದಿ : ಆರ್.ಆರ್ ನಗರಕ್ಕೆ ಕುಸುಮಾಗೆ `ಕೈ’ ಟಿಕೆಟ್ ಪಕ್ಕಾ; ಶಿರಾಗೆ ಅಮ್ಮಾಜಮ್ಮಗೆ ಜೆಡಿಎಸ್ ಟಿಕೆಟ್
ನನಗೂ ಪಕ್ಷಾತೀತವಾಗಿ ಹಿರಿಯ, ಕಿರಿಯ ಸ್ನೇಹಿತರಿದ್ದಾರೆ. ಪವಿತ್ರ ಸ್ನೇಹವನ್ನು ನಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿಲ್ಲ.
ಆದರೆ,ಸಿದ್ದರಾಮಯ್ಯರವರಿಗೆ ಇದೊಂದು ಅಂಟುಜಾಡ್ಯ ಎಂಬುದನ್ನು ಸಾಬೀತು ಪಡಿಸುತ್ತಲೆ ಬಂದಿದ್ದಾರೆ.
ಉಪಚುನಾವಣೆ ಘೋಷಣೆಯಾದ ನಂತರ ಪುತ್ರನ ಗೆಳೆಯನನ್ನು ಬಿಜೆಪಿಗೆ ಕಳುಹಿಸಿರುವ ಮರ್ಮವನ್ನು ಕಾಂಗ್ರೆಸ್ಸಿಗರೂ ಬಲ್ಲರು ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.
ಕೊನೆಯಲ್ಲಿ “ಎನ್ನ ಮನವೆಂಬ ಮರ್ಕಟನು
ತನುವಿಕಾರವೆಂಬ ಅಲ್ಪಸುಖದಾಸೆಗಾಡಿ,
ವೃಥಾ ಭ್ರಮೆಗೊಂಡು, ನಾನಾ ದೆಸೆಗೆ ಲಂಘಿಸಿ
ಅಳಲಿಸಿ ಬಳಲಿಸುತ್ತಿದೆ ನೋಡಾ:
ಕೂಡಲಸಂಗಮೇವರೆಂಬ ಕಲ್ಪವೃಕ್ಷಕ್ಕೆ ಲಂಘಿಸಿ,
ಅಪರಿಮಿತದ ಸುಖವನೈದದು, ನೋಡಾ ಎಂದು ವಚನವನ್ನು ಬರೆದುಕೊಂಡಿದ್ದಾರೆ ಕುಮಾರಸ್ವಾಮಿ.
ಇದನ್ನೂ ಓದಿ : ಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ವಾ, ಸತ್ಯಹರಿಶ್ಚಂದ್ರರೇ ಇದ್ದಾರಾ ? ಸತೀಶ್ ಜಾರಕಿಹೊಳಿ ತಿರುಗೇಟು