ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಾಸ್ಕ್ ಹಾಕಿ, ಇಲ್ಲಾಂದ್ರೆ ಕೊರೊನಾ ಟೆಸ್ಟ್, 50ಸಾವಿರ ದಂಡ, 3 ವರ್ಷ ಜೈಲು..!

admin by admin
October 7, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸಿಗದೆ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ.
ಇಂದಿನಿಂದ ಮಾಸ್ಕ್ ಧರಿಸದವರಿಗೆ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಗುತ್ತಿದೆ. ಕೊರೊನಾ ಟೆಸ್ಟ್ ಮಾಡಿಸಿಕೊಳ್ಳದೇ ಇದ್ದರೆ 6 ತಿಂಗಳಿಂದ 3 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಒಪ್ಪದೇ ಇದ್ದವರಿಗೆ 1 ಸಾವಿರ ಅಲ್ಲ, 50 ಸಾವಿರ ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸಲು ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ-2020 ಜಾರಿಗೆ ತಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Corona Virusರಾಜ್ಯದಲ್ಲಿ ಕಳೆದ ಮೂರು ವಾರಗಳಿಂದ ಕೊರೊನಾ ತೀವ್ರತೆ ಶೇ.39ರಷ್ಟು ಹೆಚ್ಚಾಗಿದೆ. ಪ್ರತಿದಿನ ಕೊರೊನಾ ಸೋಂಕಿತರ ಸಂಖ್ಯೆ 10 ಸಾವಿರ ಆಸುಪಾಸು ಬರುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಧಾರಕ್ಕೆ ಬರಲಾಗಿದೆ.
ಈಗಿರುವ ಮಾಸ್ಕ್ ಧರಿಸವರಿಗೆ 1 ಸಾವಿರ ರೂ. ದಂಡದ ಜೊತೆಗೆ, ಮಾಸ್ಕ್ ಹಾಕಿಲ್ಲದಿದ್ದರೆ ಸ್ಥಳದಲ್ಲಿಯೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ. ಕೊರೊನಾ ಟೆಸ್ಟ್‍ಗೆ ಒಪ್ಪದಿದ್ದರೆ ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ 50 ಸಾವಿರ ದಂಡ ಹಾಗೂ 6 ತಿಂಗಳಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆ ಜಾರಿಗೆ ತಂದಿದೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

 

ಕೊರೊನಾ ಟೆಸ್ಟ್ ರಿಪೋರ್ಟ್ ಕಡ್ಡಾಯ
ರಾಜ್ಯದಲ್ಲಿ ಇನ್ನು ಮುಂದೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ನಿರಾಕರಿಸುವಂತಿಲ್ಲ. ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲೇಬೇಕು. ಪ್ರವಾಸಿ ತಾಣಗಳ ಚೆಕ್‍ಪೋಸ್ಟ್‍ಗಳಲ್ಲಿ ಗಂಟಲು ದ್ರವ ಸಂಗ್ರಹಕ್ಕೆ ಸರ್ಕಾರ ಸೂಚನೆ ನೀಡಿದೆ. ಹೋಟೆಲ್, ಹೋಂ ಸ್ಟೇಗಳಲ್ಲಿ ಉಳಿಯುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ರಿಪೋರ್ಟ್ ಕೊಡುವುದು ಕಡ್ಡಾಯ ಮಾಡಲಾಗಿದೆ.

ಯಾರಿಗೆ ಕೊರೊನಾ ಟೆಸ್ಟ್ ಕಡ್ಡಾಯ..!
1. ಕೊರೊನಾ ಸೋಂಕಿತರ ಜೊತೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರು ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು.
2. ಜ್ವರದ ಲಕ್ಷಣ ಇರುವವರು, ಉಸಿರಾಟದ ತೊಂದರೆಯಿಂದ ಬಳಲುತ್ತಿರುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು.
3. ಕೋವಿಡ್ ಚಿಕಿತ್ಸೆಯಲ್ಲಿ ತೊಡಗಿರುವ ಆರೋಗ್ಯ ಸಿಬ್ಬಂದಿ ಟೆಸ್ಟ್ ಮಾಡಿಸಿಕೊಳ್ಳಬೇಕು.
4. ಕಂಟೈನ್‍ಮೆಂಟ್ ಝೋನ್, ಬಫರ್ ಝೋನ್‍ಗಳಲ್ಲಿ ಇರುವವರು
ಮೇಲ್ಕಂಡ ಅಂಶಗಳು ಇರುವವರು ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲೇಬೇಕು. ಟೆಸ್ಟ್ ಮಾಡಿಸಿಕೊಳ್ಳದೇ ಹೋದರೆ 50 ಸಾವಿರ ದಂಡ ಹಾಗೂ 6 ತಿಂಗಳಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ಅನುಭಿಸಬೇಕಾಗುತ್ತದೆ ಎಂದು ಸುಗ್ರೀವಾಜ್ಞೆಯಲ್ಲಿ ತಿಳಿಸಲಾಗಿದೆ.

1000 ರೂ. ದಂಡದ ಮೊತ್ತ ಇಳಿಕೆ ಇಲ್ಲವೇ ಇಲ್ಲ
ಬೆಂಗಳೂರಿನಲ್ಲಿ ಮಾಸ್ಕ್ ಹಾಕದಿದ್ದರೆ ಬಿಬಿಎಪಿ 1000 ರೂ. ದಂಡ ವಿಧಿಸುತ್ತಿದೆ. ದಂಡ ಮೊತ್ತ ಕಡಿಮೆ ಮಾಡುವ ಪ್ರಮೇಯವೇ ಇಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.

ಮಾಸ್ಕ್ ಹಾಕಿಕೊಳ್ಳುವುದನ್ನು ಕಡ್ಡಾಯ ಮಾಡಿದ್ದೇವೆ. ಮಾಸ್ಕ್ ಹಾಕದವರನ್ನು ಕೊರೊನಾ ಟೆಸ್ಟ್ ಮಾಡುತ್ತಾರೆ. ಮಾರ್ಷಲ್‍ಗಳು ಮಾಸ್ಕ್ ಹಾಕದವರಿಗೆ 1000 ರೂ. ದಂಡ ಹಾಕುತ್ತಿದ್ದಾರೆ. ದಂಡ ಕಟ್ಟದ ಪ್ರಕರಣಗಳನ್ನು ಪೊಲೀಸರಿಗೆ ಹಸ್ತಾಂತರ ಮಾಡಲಾಗುತ್ತಿದೆ.
ಕೊರೊನಾ ಟೆಸ್ಟ್ ಮಾಡಿಸಿಕೊಂಡು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡ 840 ಕೇಸ್‍ಗಳನ್ನು ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ. ಈ ಕೇಸ್‍ಗಳನಬ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಹೀಗಾಗಿ ಕೊರೊನಾ ವಿರುದ್ಧದ ಹೋರಾಟಕ್ಕೆ ಜನರು ಸಹಕಾರ ನೀಡಲೇಕು ಎಂದು ಮಂಜುನಾಥ್ ಪ್ರಸಾದ್ ಮನವಿ ಮಾಡಿದ್ದಾರೆ.

ಇನ್ಮುಂದೆ ಪೊಲೀಸರಿಂದಲೂ ದಂಡ ವಸೂಲಿ
ಇಲ್ಲಿಯವರೆಗೆ ಬೆಂಗಳೂರು ನಗರದಲ್ಲಿ ಮಾಸ್ಕ್ ಹಾಕದವರಿಗೆ ಬಿಬಿಎಂಪಿಯ ಮಾರ್ಷಲ್‍ಗಳು ಮಾತ್ರ ದಂಡ ವಸೂಲಿ ಮಾಡುತ್ತಿದ್ದರು. ಆದ್ರೆ, ಜನರು ಮಾರ್ಷಲ್‍ಗಳಿಗೆ ಕ್ಯಾರೆ ಎನ್ನದೇ ಅವರ ಜೊತೆ ಜಗಳಕ್ಕೆ ನಿಲ್ಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಸ್ಕ್ ಹಾಕದವರಿಗೆ ಪೊಲೀಸರೂ ಕೂಡ ಕಮಿಷನರೇಟ್ ವ್ಯಾಪ್ತಿಯಲ್ಲಿ ದಂಡ ವಿಧಿಸಲು ಅವಕಾಶ ನೀಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

Tags: bangaloreBBMPCoronaCorona Testmask compusoryNew-rulesordinence
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram