ಯಾದಗಿರಿ: ಉತ್ತರಪ್ರದೇಶದ ಹತ್ರಾಸ್‍ನಲ್ಲಿ ದಲಿತ ಯುವತಿ ಮೇಲೆ ಅತ್ಯಾಚಾರ ಕೊಲೆ ಘಟನೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಯಾದಗಿರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಯಾದಗಿರಿಯ ಸುಭಾಷ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿಯನ್ನು ಪ್ರತಿಭಟನಾಕಾರರು ಖಂಡಿಸಿದರು. ಪ್ರತಿಭಟನೆ ವೇಳೆ ಕೆಲ ಕಾರ್ಯಕರ್ತರು ಮಾಸ್ಕ್ ಧರಿಸದೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದು ಕಂಡು ಬಂತು.
ರಸ್ತೆ ಅಪಘಾತದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರೆ ₹25,000 ಬಹುಮಾನ
ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರನ್ನು ಗೋಲ್ಡನ್ ಅವರ್ (ಮೊದಲ ಗಂಟೆ) ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸುವ ಉತ್ತಮ ನಾಗರಿಕರಿಗೆ ನೀಡುವ ಬಹುಮಾನದ ಮೊತ್ತವನ್ನು ಕೇಂದ್ರ ಸರ್ಕಾರ ₹5,000ರಿಂದ ₹25,000ಕ್ಕೆ ಹೆಚ್ಚಿಸಿದೆ....