ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ ( Ram Vilas Paswan )
ಹೊಸದಿಲ್ಲಿ, ಅಕ್ಟೋಬರ್08: ಕೇಂದ್ರ ಸಚಿವ ಮತ್ತು ಎಲ್ಜೆಪಿ ಅಧ್ಯಕ್ಷ ರಾಮ್ ವಿಲಾಸ್ ಪಾಸ್ವಾನ್ ಗುರುವಾರ ನಿಧನರಾಗಿದ್ದಾರೆ. Ram Vilas Paswan
ಅವರಿಗೆ 74 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ದಿನಗಳ ಹಿಂದೆ ಹೃದಯ ಶಸ್ತ್ರಚಿಕಿತ್ಸೆ ಯನ್ನು ನಡೆಸಲಾಗಿತ್ತು.
ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಸಕ್ರಿಯ ರಾಜಕೀಯದಲ್ಲಿದ್ದ ಅವರು ದೇಶದ ಅತ್ಯಂತ ಪ್ರಸಿದ್ಧ ದಲಿತ ನಾಯಕರಲ್ಲಿ ಒಬ್ಬರು.
ಪಪ್ಪ.. ಈಗ ನೀವು ಈ ಜಗತ್ತಿನಲ್ಲಿಲ್ಲ.. ಆದರೆ ನೀವು ಎಲ್ಲಿದ್ದರೂ ಯಾವಾಗಲೂ ನನ್ನೊಂದಿಗೆ ಇರುತ್ತೀರಿ ಎಂದು ನನಗೆ ತಿಳಿದಿದೆ ಎಂದು ಚಿರಾಗ್ ಪಾಸ್ವಾನ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
पापा….अब आप इस दुनिया में नहीं हैं लेकिन मुझे पता है आप जहां भी हैं हमेशा मेरे साथ हैं।
Miss you Papa… pic.twitter.com/Qc9wF6Jl6Z— युवा बिहारी चिराग पासवान (@iChiragPaswan) October 8, 2020
ತನ್ನ ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತಿದ್ದ ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಕಳೆದ ವಾರ ಟ್ವೀಟ್ ಮಾಡಿ ಕಳೆದ ಹಲವು ದಿನಗಳಿಂದ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ಸಂಜೆ ನಡೆದ ಕೆಲವು ಹಠಾತ್ ಬೆಳವಣಿಗೆಗಳಿಂದಾಗಿ, ಅವರಿಗೆ ಹೃದಯದ ಶಸ್ತ್ರಚಿಕಿತ್ಸೆ ಮಾಡಬೇಕಾಯಿತು. ಅಗತ್ಯವಿದ್ದಲ್ಲಿ, ಕೆಲವು ವಾರಗಳ ನಂತರ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಿಸಬೇಕಾಗಬಹುದು.
ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಮತ್ತೊಂದು ತಿರುವು
ಈ ಹೋರಾಟದ ಸಮಯದಲ್ಲಿ ನನ್ನ ಮತ್ತು ನನ್ನ ಕುಟುಂಬದ ಜೊತೆ ನಿಂತಿದ್ದ ಎಲ್ಲರಿಗೂ ಧನ್ಯವಾದಗಳು ಎಂದು ಪೋಸ್ಟ್ ಮಾಡಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ