ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೋನಾ ವೈರಸ್ ಗೆ ವ್ಯಾಕ್ಸಿನ್ ಕಂಡುಹಿಡಿಯುವ ತಂಡದಲ್ಲಿ ಹಾಸನದ ಮಹದೇಶ್

admin by admin
March 17, 2020
in International, Samagra karnataka
Share on FacebookShare on TwitterShare on WhatsappShare on Telegram

ಕೊರೋನಾ ವೈರಸ್ ಗೆ ವ್ಯಾಕ್ಸಿನ್ ಕಂಡುಹಿಡಿಯುವ ತಂಡದಲ್ಲಿ ಹಾಸನ ಜಿಲ್ಲೆಯ ಮಹದೇಶ ಪ್ರಸಾದ್ ಸ್ಥಾನ ಪಡೆದಿದ್ದಾರೆ. ಮಹದೇಶ ಪ್ರಸಾದ್ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನವರಾಗಿದ್ದು, ಯುರೋಪಿಯನ್ ಟಾಸ್ಕ್ ಫೋರ್ಸ್ ಫಾರ್ ಕೊರೊನ ವೈರಸ್ ತಂಡದಲ್ಲಿ ಸ್ಥಾನ ಪಡೆದವರು. ಮೈಸೂರು ವಿಶ್ವ ವಿದ್ಯಾಲಯದ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಅವಧಿಯಲ್ಲಿ ಬಯೋಕೆಮಿಸ್ಟ್ರಿ ಪಿಹೆಚ್ ಡಿ ಸ್ನಾತಕ ಪದವಿ ಗಳಿಸಿದ ಮೊಟ್ಟ ಮೊದಲ ಕಿರಿಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಡಾ ಮಹದೇಶ್ ಪ್ರಸಾದ್ ಜರ್ಮನಿಯಲ್ಲಿ ವಿಜ್ಞಾನಿಯಾಗಿದ್ದರು. ವಿದೇಶದಲ್ಲಿರುವ ವಿಜ್ಞಾನಿಗಳು ಹಿಂದಿರುಗಿ ಎಂಬ ಪ್ರಧಾನಿ ಮೋದಿ ಕರೆ ಮೆರೆಗೆ ಮಹದೇಶ್ ಭಾರತಕ್ಕೆ ಮರಳಿದ್ದರು. ಆದರೆ ಇದೀಗ ಮಹದೇಶ್ ಸಂಶೋಧನಕ್ಕೆ ಸಂಬಂಧಿಸಿದಂತೆ ಬೆಲ್ಜಿಯಂನಲ್ಲಿ ನೆಲೆಸಿದ್ದಾರೆ. ಯುರೋಪ್ ರಾಷ್ಟ್ರಗಳು ಒಗ್ಗೂಡಿ ವಿಶ್ವ ಸಂಸ್ಥೆ ಕೊರೋನ ವ್ಯಾಕ್ಸಿನ್ ಕಂಡು ಹಿಡಿಯಲು ಹತ್ತು ತಂಡ ರಚಿಸಿದ್ದು, ಈ ತಂಡದಲ್ಲಿ ಹೆಮ್ಮೆಯ ಕನ್ನಡಿಗ ಮಹದೇಶ ಪ್ರಸಾದ್ ಇದೀಗ ಸ್ಥಾನ ಪಡೆದಿದ್ದಾರೆ. ಮಹದೇಶ ಪ್ರಸಾದ್ ಕುಟುಂಬಸ್ಥರು ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಹಾಸನದ ಸರ್ಕಾರಿ ಶಾಲೆಯಲ್ಲಿ ಶಿಕ್ಷಣವನ್ನು ಮುಗಿಸಿದ ಮಹದೇಶ ಪ್ರಸಾದ್, ಬಿಎಸ್‍ಸಿ ಹಾಸನದ ಸರ್ಕಾರಿ ಕಾಲೇಜಿನಲ್ಲಿ ಓದಿದ್ದಾರೆ. ಎಂಎಸ್‍ಸಿ ಹಾಗೂ ಪಿಎಚ್‍ಡಿ ಮೈಸೂರು ವಿವಿಯಲ್ಲಿ ವ್ಯಾಸಂಗ ಮಾಡಿದ್ದಾರೆ. ಮಹದೇಶ ಪ್ರಸಾದ್ ಕಿರಿಯ ವಯಸ್ಸಿನಲ್ಲಿಯೇ ಸಾಧನೆಗಾಗಿ ಸತತ 5 ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪುರಸ್ಕಾರಗಳನ್ನು ಮತ್ತು ಗೌರವಗಳನ್ನು ಪಡೆದು, ಮೊದಲ ಕಿರಿಯ ವಿಜ್ಞಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಮಹದೇಶ ಪ್ರಸಾದ್ 2019ರಲ್ಲಿ ಬೆಲ್ಜಿಯಂ ದೇಶದಲ್ಲಿ ವಿಸಿಟಿಂಗ್ ವೈರಾಲಜಿ ಫೆಲೋಶಿಪ್ ಅವಾರ್ಡ್, 2016ರಲ್ಲಿ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ ರೀಸರ್ಚ್ ಬೋರ್ಡ್ ನಿಂದ ಯಂಗ್ ಸೈಂಟಿಸ್ಟ್ ಅವಾರ್ಡ್, 2012ರಲ್ಲಿ ಸ್ವೀಡನ್ ದೇಶದಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಅವಾರ್ಡ್, 2010ರಲ್ಲಿ ಯುಎಸ್‍ಎ ದೇಶದಿಂದ ಎನ್‍.ಐ.ಹೆಚ್ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಅವಾರ್ಡ್, 2009ರಲ್ಲಿ ಜರ್ಮನಿಯಲ್ಲಿ DAAD ಫೆಲೋಶಿಪ್ ಅವಾರ್ಡ್ ಪಡೆದಿದ್ದಾರೆ. ಜೊತೆಗೆ ಬಯೋಕೆಮಿಸ್ಟ್ರಿ, ವೈರಾಲಜಿ, ಸ್ಟೆಮ್ ಸೆಲ್ ಬಯಾಲಜಿ, ಟ್ಯೂಮರ್ ವೈರಾಲಜಿ, ಕ್ಯಾನ್ಸರ್ ಜೆನೆಟಿಕ್ಸ್, ಸಿಸ್ಟಂ ವ್ಯಾಕ್ಸಿನಾಲಜಿ ಸೇರಿದಂತೆ ಹಲವು ವಿಷಯಗಳ ಕುರಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ 16 ಪ್ರಬಂಧಗಳನ್ನು ಮಂಡಿಸಿದ್ದಾರೆ. ಅಲ್ಲದೆ ಸರ್ಟಿಫೈಡ್ ಲ್ಯಾಬ್ ಅನಿಮಲ್ ಎಕ್ಸಪರ್ಟ್ ಎಂದು ಯೂರೋಪಿಯನ್ ಕೌನ್ಸಿಲ್ ಮನ್ನಣೆ ನೀಡಿದೆ.

Related posts

high-court-invalidates-election-of-congress-mla-nanje-gowda-orders-recount-of-votes

ಕಾಂಗ್ರೆಸ್‌ ಶಾಸಕ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

September 16, 2025
ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

May 8, 2025

ಮಹದೇಶ್ ಪ್ರಸಾದ್ ಅವರ ತಾಯಿ ರತ್ನಮ್ಮ, ನನ್ನ ಮಗ ಕೊರೊನಾಗೆ ಔಷಧ ಕಂಡು ಹಿಡಿಯುವ ತಂಡದಲ್ಲಿ ಸ್ಥಾನ ಪಡೆದಿರುವುದು ನನಗೆ ತುಂಬಾ ಖುಷಿ ತಂದಿದೆ ಹಾಗೂ ತುಂಬಾ ಹೆಮ್ಮೆ ಇದೆ. ಈಗಾಗಲೇ ಕೊರೊನಾ ವೈರಸ್ ಇಡೀ ವಿಶ್ವದಲ್ಲಿ 5 ಸಾವಿರ ಜನರನ್ನು ಬಲಿ ಪಡೆದುಕೊಂಡಿದೆ. ಅಂತಹದರಲ್ಲಿ ನನ್ನ ಮಗ ಔಷಧಿ ಕಂಡು ಹಿಡಿದರೆ ಎಷ್ಟೋ ಜನರ ಪ್ರಾಣ ಉಳಿಯುತ್ತೆ ಎಂಬ ಖುಷಿ ಹಾಗೂ ಹೆಮ್ಮೆ ನನಗಿದೆ. ನನ್ನ ಮಗ ಔಷಧಿ ಕಂಡು ಹಿಡಿದು ಕೋಟ್ಯಂತರ ಜನರಿಗೆ ಉಪಯೋಗ ಆಗಲಿ ಎಂಬುದು ನಮ್ಮ ಆಶಯ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

Tags: Corona vaccinecoronavirusEuropeHassan
ShareTweetSendShare
Join us on:

Related Posts

high-court-invalidates-election-of-congress-mla-nanje-gowda-orders-recount-of-votes

ಕಾಂಗ್ರೆಸ್‌ ಶಾಸಕ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

by Saaksha Editor
September 16, 2025
0

ಬೆಂಗಳೂರು, ಸೆ.16: ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ (Congress) ಶಾಸಕ ಕೆವೈ ನಂಜೇಗೌಡ (KY Nanjegowda) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್‌ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ, ಮತ...

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

by Shwetha
May 8, 2025
0

ಆಪರೇಷನ್ ಸಿಂಧೂರ... ಈ ರಣಬೇಟೆ..ಪಾಕಿಸ್ತಾನದ ಎದೆಯಲ್ಲಿ ಅವಲಕ್ಕಿ ಕುಟ್ಟಿದಂತೆ ಮಾಡ್ಬಿಟ್ಟಿದೆ.. ತಮ್ಮದು ಕೆಚ್ಚೆದೆ.. ಕೆಚ್ಚೆದೆ ಅಂತಿದ್ದವರ ಗುಂಡಿಗೆ ಗಢಗಢನೇ ಅಲ್ಲಾಡಿ ಹೋಗಿದೆ... ಹೃದಯ ಒಂದ್ಸಾರಿ.. ಬಲಕ್ಕೆ ಓಡಿ...

ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

by Author2
January 22, 2025
0

ಇಸ್ತಾಂಬುಲ್:‌ ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ (Turkey Ski Resort) ಹೋಟೆಲ್‌ ನಲ್ಲಿ ಸಂಭವಿಸಿದ ಅಗ್ನಿ ದುರಂತರದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, 51 ಜನ...

ಅಧಿಕಾರ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

ಅಧಿಕಾರ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

by Author2
January 21, 2025
0

ಷಿಂಗ್ಟನ್‌: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ (Donald Trump) ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ವಿದೇಶಗಳಿಗೆ ತೆರಿಗೆ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ. ಅಲ್ಲದೇ, 80...

ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆ

ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆ

by Author2
January 20, 2025
0

ವಾಷಿಂಗ್ಟನ್: ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆಯಾಗಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಭಾರತೀಯ ಮೂಲದ ಯುವಕ ಸಾವನ್ನಪ್ಪಿದ್ದಾನೆ. ಅಮೆರಿಕದ (America) ವಾಷಿಂಗ್ಟನ್ ಡಿಸಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram