ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜನಾಕ್ರೋಶಕ್ಕೆ ಮಂಡಿಯೂರಿದ `ರಾಜಾಹುಲಿ’ ಸರ್ಕಾರ; `ವಿದ್ಯಾಗಮ’ ತಾತ್ಕಾಲಿಕ ಸ್ಥಗಿತ

Kariyappa N by Kariyappa N
October 10, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸರಣಿ ಶಿಕ್ಷಕರ ಸಾವು ಹಾಗೂ ಮಕ್ಕಳ ಜೀವಕ್ಕೆ ಆಪತ್ತು ತಂದಿದ್ದ ಶಿಕ್ಷಣ ಇಲಾಖೆಯ ವಿದ್ಯಾಗಮ ಯೋಜನೆಗೆ ರಾಜ್ಯಾದ್ಯಂತ ಆಕ್ರೋಶ ಹೆಚ್ಚುತ್ತಿದ್ದಂತೆ ರಾಜ್ಯ ಸರ್ಕಾರ ಮಂಡಿಯೂರಿದೆ.
ಶಿಕ್ಷಕರು ಸೇರಿದಂತೆ ಪೋಷಕರಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿದ್ಯಾಗಮ ಯೋಜನೆ ಆರಂಭದ ನಂತರ ಎಷ್ಟು ಮಂದಿ ಶಿಕ್ಷಕರು ಕೊರೊನಾಗೆ ಬಲಿಯಾಗಿದ್ದಾರೆ ಎಂಬುದರ ಬಗ್ಗೆ ಜಿಲ್ಲಾವಾರು ಅಂಕಿ-ಅಂಶಗಳ ಸಂಗ್ರಹಕ್ಕೆ ಶಿಕ್ಷಣ ಇಲಾಖೆಗೆ ಸೂಚನೆ ನೀಡಿರುವ ಸುರೇಶ್ ಕುಮಾರ್, ಅಲ್ಲಿಯವರೆಗೆ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲು ಆದೇಶ ನೀಡಿದ್ದಾರೆ.
ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಜಿಲ್ಲಾವಾರು ಅಂಕಿ-ಅಂಶಗಳ ಸ್ವೀಕಾರ, ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೆ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸುರೇಶ್‍ಕುಮಾರ್ ಫೇಸ್‍ಬುಕ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Related posts

r-ashoka-protest-demanding-minister-b-nagendra-resignation-valmiki-corporation-scam

ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಕೆ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 21, 2026
nityananda-hegde-appointed-president-tuluva-mahasabha-international-singapore-unit

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ನೇಮಕ

August 21, 2026

ಅಖಾಡಕ್ಕೆ ಯಡಿಯೂರಪ್ಪ ಅವರೇ ಎಂಟ್ರಿ ಕೊಡಬೇಕಾಯ್ತಾ..!
ರಾಜ್ಯ ಸರ್ಕಾರದ ಅವೈಜ್ಞಾನಿಕ ನಿರ್ಧಾರಗಳ ಬಗ್ಗೆ ಜನಾಭಿಪ್ರಾಯ ಹಾಗೂ ಜನರ ಆಕ್ರೋಶ ಹೆಚ್ಚಾದರೂ ಸಂಬಂಧ ಪಟ್ಟ ಇಲಾಖೆಗಳಾಗಲೀ, ಸಚಿವರಾಗಲಿ ಮಣಿಯದ ಹಲವು ಉದಾಹರಣೆಗಳು ರಾಜ್ಯದ ಜನರ ಮುಂದಿವೆ.

ಇದೀಗ ವಿದ್ಯಾಗಮ ಯೋಜನೆ ವಿರುದ್ಧ ಶಿಕ್ಷಕ ವರ್ಗ ಹಾಗೂ ಪೋಷಕರು ದೊಡ್ಡಮಟ್ಟದಲ್ಲಿ ಧ್ವನಿ ಎತ್ತಿದರೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಅಧಿಕಾರಿಗಳು ತಲೆ ಕೆಡಿಸಿಕೊಳ್ಳಲಿಲ್ಲ. ಈ ವೇಳೆ ಎಂಟ್ರಿ ಕೊಟ್ಟವರೇ ರಾಜಾಹುಲಿ ಖ್ಯಾತಿಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ. ಮಾಧ್ಯಮಗಳಲ್ಲಿ ಜನರು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದನ್ನು ಖುದ್ದು ಯಡಿಯೂರಪ್ಪ ಗಮನಿಸಿದ್ದಾರೆ. ಜತೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೂಡ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ವಿದ್ಯಾಗಮ ಕಾರ್ಯಕ್ರಮ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಇದೆಲ್ಲವನ್ನೂ ಗಮನಿಸಿದ ಸಿಎಂ ಯಡಿಯೂರಪ್ಪ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಕರೆ ಮಾಡಿ ಯೋಜನೆ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಸಿಎಂ ಬಿಎಸ್‍ವೈ ಕರೆ ಬರುವವರೆಗೆ ಪಟ್ಟುಹಿಡಿದು ಕುಳಿತಿದ್ದ ಸುರೇಶ್ ಕುಮಾರ್ ಕೊನೆಗೂ ಮಂಡಿಯೂರಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಮಾಸ್ಕ್ ದಂಡ ಹೆಚ್ಚಳವನ್ನು ಕಡಿಮೆ ಮಾಡುವಾಗ, ಶಾಲೆಗಳನ್ನು ಆರಂಭಿಸುವ ವಿಚಾರದಲ್ಲಿ ಎದುರಾಗಿದ್ದ ಗೊಂದಲಗಳಿಗೆ ಖುದ್ದು ಯಡಿಯೂರಪ್ಪ ಅವರೇ ಎಂಟ್ರಿ ಕೊಟ್ಟು ಜನರ ಆಕ್ರೋಶ ತಣ್ಣಗಾಗುವಂತೆ ಮಾಡಿರುವುದು ಗಮನಾರ್ಹವಾಗಿದೆ.

ಸರ್ಕಾರಕ್ಕೆ ಧನ್ಯವಾದ ಹೇಳಿದ ಕುಮಾರಸ್ವಾಮಿ
ರಾಜ್ಯಾದ್ಯಂತ ಆಕ್ರೋಶಕ್ಕೆ ಗುರಿಯಾಗಿದ್ದ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಧನ್ಯವಾದ ತಿಳಿಸಿದ್ದಾರೆ.
ಕಾರ್ಯಕ್ರಮ ರದ್ದು ಮಾಡಲು ಕುಮಾರಸ್ವಾಮಿ ಸೋಮವಾರದವರೆಗೆ ಗುಡುವು ನೀಡಿದ್ದರು. ಜತೆಗೆ ಸಿಎಂ ಯಡಿಯೂರಪ್ಪ ಅವರಿಗೆ ಕರೆ ಮಾಡಿ ಮಾತನಾಡಿದ್ದರು. ಇದಾದ ಕೆಲವೇ ನಿಮಿಷಗಳಲ್ಲಿ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆದೇಶ ನೀಡಿರುವುದು ಕೊರೊನಾದಿಂದ ಸಂಕಷ್ಟದಲ್ಲಿದ್ದ ಶಿಕ್ಷಕರ ನೋವಿಗೆ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

Tags: b.s yaduyurappaCoronaH.D Kumara swamyS.Suresh kumarVidyagama. temporary stoped
ShareTweetSendShare
Join us on:

Related Posts

r-ashoka-protest-demanding-minister-b-nagendra-resignation-valmiki-corporation-scam

ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಕೆ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 21, 2026
0

  ಬೆಂಗಳೂರು,  ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಸಲಿದ್ದು, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸದನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ...

nityananda-hegde-appointed-president-tuluva-mahasabha-international-singapore-unit

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ನೇಮಕ

by admin
August 21, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಸಿಂಗಾಪುರ ಘಟಕದ ಅಧ್ಯಕ್ಷರಾಗಿ...

cm-dk-shivakumar-addresses-icai-chartered-accountants-conference-bengaluru

ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ ಕೆ ಶಿವಕುಮಾರ್

by admin
August 21, 2026
0

ಬೆಂಗಳೂರು,  “ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನವಿರಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ...

karnataka-apartment-ownership-and-management-bill-2026-krishna-byre-gowda-vidhana-soudha

ಲಕ್ಷಾಂತರ ಆಸ್ತಿ ಮಾಲೀಕರಿಗೆ ‘ಭೂ ಗ್ಯಾರಂಟಿ’: ‘ಬಿ-ಖಾತಾ’ ನಿವೇಶನಗಳಿಗೆ ಪಕ್ಕಾ ‘ಎ-ಖಾತಾ’: ಕೃಷ್ಣ ಬೈರೇಗೌಡ

by admin
August 21, 2026
0

• ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ-2026ಕ್ಕೆ ಸದನ ಅನುಮೋದನೆ • ಅನಧಿಕೃತ ಬಡಾವಣೆಗಳ ರಸ್ತೆಗಳನ್ನು 'ಸಾರ್ವಜನಿಕ ರಸ್ತೆ' ಎಂದು ಘೋಷಿಸಲು ಸೆಕ್ಷನ್ 284ಕ್ಕೆ ತಿದ್ದುಪಡಿ •...

karnataka-apartment-ownership-and-management-bill-2026-krishna-byre-gowda-vidhana-soudha

ಅಪಾರ್ಟ್ಮೆಂಟ್ ನಿವಾಸಿಗಳ ಹಿತರಕ್ಷಣೆಗಾಗಿ ಕಟ್ಟುನಿಟ್ಟಿನ ಹೊಸ ವಿಧೇಯಕ: ಕೃಷ್ಣ ಬೈರೇಗೌಡ

by admin
August 21, 2026
0

• ಒಂದು ಅಪಾರ್ಟ್ಮೆಂಟ್ ಗೆ ಒಂದೇ ಅಸೋಸಿಯೇಷನ್ • ಸಾಮಾನ್ಯ ಪ್ರದೇಶಗಳ ಮೇಲಿನ ಹಕ್ಕು • ವ್ಯಾಜ್ಯ ಇತ್ಯರ್ಥಕ್ಕೆ ಸಕ್ಷಮ ಪ್ರಾಧಿಕಾರಗಳ ಸ್ಥಾಪನೆ • ಕಟ್ಟಡ ಮರುನಿರ್ಮಾಣಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram