ಅ.12ರಿಂದ ಅ.30ರವರೆಗೆ ಮಧ್ಯಂತರ ರಜೆ
ಬೆಂಗಳೂರು: ಕೊರೊನಾ ಹರಡುವ ಕಾರ್ಯಕ್ರಮವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾಗಮಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ ಬೆನ್ನಲ್ಲೇ, ರಾಜ್ಯ ಸರ್ಕಾರ ಶಿಕ್ಷಕರಿಗೂ ಮೂರು ವಾರಗಳ ಕಾಲ ರಜೆ(3 week Interim leave) ನೀಡಿ ರಿಲೀಫ್ ನೀಡಿದೆ.
ಶಿಕ್ಷಕರು ಹಾಗೂ ಆರೋಗ್ಯದ ದೃಷ್ಟಿಯಿಂದ ಅ.12ರಿಂದ ಅ.30ರವರೆಗೆ ಮಧ್ಯಂತರ ರಜೆ ಆದೇಶಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಹಿ ಹಾಕಿ ಆದೇಶ ಹೊರಡಿಸಿದ್ದಾರೆ.

ಶಿಕ್ಷಕರು ಕೋವಿಡ್-19 ಸೋಂಕಿಗೆ ಒಳಗಾಗುತ್ತಿರುವುದು ಮಾಧ್ಯಮಗಳ ಮೂಲಕ ಗಮನಿಸಿದ್ದೇನೆ. ಅವರ ಆರೋಗ್ಯದ ದೃಷ್ಟಿಯಿಂದ ಮಧ್ಯಂತರ ರಜೆ (3 week Interim leave) ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿದ್ದೇನೆ ಎಂದು ಯಡಿಯೂರಪ್ಪ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿಎಸ್ವೈ ಆದೇಶ ಸ್ವಾಗತಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಳೆದೊಂದು ವಾರದಿಂದ ಶಿಕ್ಷಕ ಸಮುದಾಯದ ನಾನಾ ರೀತಿಯ ಕಷ್ಟ ಕಾರ್ಪಣ್ಯಗಳನ್ನು ಕಂಡು ನನ್ನ ಮನಸ್ಸು ವಿಹ್ವಲಗೊಂಡಿತ್ತು. ನನ್ನ ಭಾವನೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವುದು ಶಿಕ್ಷಕರ ವೃತ್ತಿಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಶಿಕ್ಷಕರ ಸಮಸ್ಯೆಗಳನ್ನು ನನ್ನ ಸಮಸ್ಯೆಗಳೆಂದೇ ಭಾವಿಸುವ ನನ್ನ ನಿಲುವಿಗೆ ರಾಜ್ಯದ ವಿದ್ಯಾರ್ಥಿಗಳು, ಪೋಷಕರು ಮಾಧ್ಯಮಗಳ ಮೂಲಕ ಬೆಂಬಲಕ್ಕೆ ನಿಂತಿದ್ದು ಅವರಿಗೆಲ್ಲ ಕೃತಜ್ಞನಾಗಿದ್ದೇನೆ ಎಂದು ಕುಮಾರಸ್ವಾಮಿ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಮಧ್ಯಂತರ ರಜೆ ರದ್ದುಪಡಿಸಿದ್ದಕ್ಕೆ ಹೆಚ್ಡಿಕೆ ಆಕ್ರೋಶ
ಇದಕ್ಕೂ ಮೊದಲು ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಮಧ್ಯಂತರ ರಜೆ ರದ್ದು ಮಾಡಿದ್ದ ಶಿಕ್ಷಣ ಇಲಾಖೆ ಕ್ರಮವನ್ನು ಮಾಜಿ ಸಿಎಂ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿ ಟ್ವೀಟ್ ಮಾಡಿದ್ದರು.

ಎತ್ತಿ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗೆ ತೆರಳಿ ಕೆಲಸ ಮಾಡುತ್ತಿದ್ದಾರೆ.
ಕೊರೊನಾ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಚವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರ್ಕಾರ ಯಾವ ಪರುಷಾರ್ಥ ಸಾಧನೆಗೆ ಹೊರಟಿದೆ ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








