Rahul Gandhi
ನವದೆಹಲಿ: ಸದಾ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶದ ಯೋಗಿ ಸರ್ಕಾರದ ಆಡಳಿತ ವೈಖರಿ ವಿರುದ್ಧ ಸವಾಲೆತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಮತ್ತೊಮ್ಮೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಅನೇಕ ಭಾರತೀಯರು ದಲಿತರು, ಮುಸ್ಲಿಮರು ಮತ್ತು ಬುಡಕಟ್ಟು ಜನಾಂಗದವರನ್ನು ಮನುಷ್ಯರು ಎಂದು ಪರಿಗಣಿಸುವುದಿಲ್ಲ.
ಇದು ನಾಚಿಕೆಗೇಡಿನ ಸತ್ಯ ಎಂದು ರಾಹುಲ್ ಗಾಂಧಿ ಅವರು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಹತ್ರಾಸ್ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ಸರ್ಕಾರ ಮತ್ತು ಉತ್ತರಪ್ರದೇಶ ಪೊಲೀಸರು ನೀಡುತ್ತಿರುವ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ರಾಗಾ “ ಯೋಗಿ ಸರ್ಕಾರ ಮತ್ತು ಅವರ ಪೊಲೀಸರು ಯಾರೂ ಕೂಡ ಅತ್ಯಾಚಾರವಾಗಲಿಲ್ಲ ಎಂದು ಹೇಳುತ್ತಿದ್ದಾರೆ.
ಏಕೆಂದರೇ ಅತ್ಯಾಚಾರ ಸಂತ್ರಸ್ಥೆಯನ್ನು ಅವರು ಭಾರತೀಯಳೆಂದು ಪರಿಗಣಿಸಲಿಲ್ಲ.
ಅಲ್ಲದೇ ಮಾಧ್ಯಮದ ವರದಿಯನ್ನು ಉಲ್ಲೇಖಿಸಿ ಪೊಲೀಸರು ಕೂಡ ಅತ್ಯಾಚಾರ ಆರೋಪವನ್ನು ನಿರಾಕರಿಸುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.
ಉತ್ತರಪ್ರದೇಶದ ಹತ್ರಾಸ್ ಜಿಲ್ಲೆಯ ದಲಿತ ಯುವತಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ, ದೆಹಲಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು.
ಈ ಘಟನೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆಯಲ್ಲಿ ಪೊಲೀಸರು ಸಹ ಆರೋಪಿಗಳ ಪರವಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಇನ್ನೂ ಸಂತ್ರಸ್ತೆಯ ಮನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ರು..