ಇಂದಿನಿಂದ ದ.ಕ. ಜಿಲ್ಲೆಯ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಎಲ್ಲಾ ಸೇವೆಗಳನ್ನು ರದ್ದುಗೊಳಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಘೋಷಿಸಿದ್ದಾರೆ.
ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಇಂದು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗ್ಗೆ ಅಧಿಕಾರಿಗಳ ಸಭೆ ನಡೆಯಿತು.
ಸಭೆಯಲ್ಲಿ ಇಂದಿನಿಂದ ಧಾರ್ಮಿಕ ಉತ್ಸವಗಳಲ್ಲಿ ಸಿಬ್ಬಂದಿಗಳಿಗೆ ಮಾತ್ರ ಭಾಗವಹಿಸಲು ಅವಕಾಶವಿದ್ದು, ಎಲ್ಲಾ ಸೇವೆಗಳನ್ನು ರದ್ದು ಪಡಿಸಬೇಕು ಎಂಬ ನಿರ್ಣಯ ತೆಗೆದುಕೊಳ್ಳಲಾಯಿತು.
ಕರ್ನಾಟಕದಲ್ಲಿ 10 ಜನರಲ್ಲಿ ಈ ಕೊರೋನಾ ವೈರಸ್ ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರಕಾರ ಇದನ್ನು ಸವಾಲಾಗಿ ಸ್ವೀಕರಿಸಿ ತಡೆಗಟ್ಟಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ರಾಜ್ಯದಲ್ಲಿ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು ಈ ಸಂದರ್ಭದಲ್ಲಿ ತಿಳಿಸಿದರು.
ಶಾಸಕ ಯುಟಿ ಖಾದರ್ ಬೀಚ್ ಗಳಲ್ಲಿ ಜನ ಕಂಡಲ್ಲಿ ಕೂಡಲೇ ದಂಡ ವಿಧಿಸಿ ಎಂದು ಸಲಹೆ ನೀಡಿದ್ದು, ಅಪರ ಜಿಲ್ಲಾಧಿಕಾರಿ ಬೀಚ್ ಪ್ರವೇಶಕ್ಕೆ ನಿರ್ಬಂಧ ಹೇರಲಾಗುವುದು ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಇಂದಿನಿಂದ ಥರ್ಮಲ್ ಸ್ಕ್ರೀನಿಂಗ್ ಆರಂಭ ಮಾಡಲಾಗುವುದು ಎಂದು ತಿಳಿಸಿದರು.
ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!
ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....








