(bihar) ಬಿಹಾರದಲ್ಲಿ ವಿಧಾನಸಬಾ ಚುನಾವಣಾ ಕಣ ರಂಗೇರುತ್ತಿದೆ. ಬಿಜೆಪಿ, ಕಾಂಗ್ರೆಸ್, ಶಿವಸೇನಾ ಸೇರಿದಂತೆ ಎಲ್ಲ ಪಕ್ಷಗಳು ಅಧಿಕಾರದ ಗದ್ದುಗೆಗಾಗಿ ನಾನಾ ಕಸರತ್ತು ನಡೆಸುತ್ತಿವೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ಚುನಾವಣಾ ಪ್ರಚಾರಕ್ಕೆ 30 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಹೌದು ಬಿಹಾರ (bihar) ವಿಧಾನಸಭೆ ಚುನಾವಣೆಯಲ್ಲಿ ಬಿರುಸಿನ ಪ್ರಚಾರ ಕೈಗೊಳ್ಳಲಿರುವ ಸ್ಟಾರ್ ಪ್ರಚಾರಕರನ್ನು ಬಿಜೆಪಿ ಇಂದು ಹೆಸರಿಸಿದೆ.
ಪ್ರಧಾನಿ ಮೋದಿ ಸೇರಿದಂತೆ 30 ಮಂದಿ ಸ್ಟಾರ್ ಪ್ರಚಾರಕರಿದ್ದಾರೆ.ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಬಿಹಾರದಲ್ಲಿ ಪಕ್ಷದ ಉಸ್ತುವಾರಿಯಾಗಿ ನೇಮಿಸಲಾಗಿದೆ. ದೇವೇಂದ್ರ ಅವರು ಪ್ರಚಾರಕರಾಗಿ ಕೂಡಾ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಜಾರ್ಖಂಡ್ ಮಾಜಿ ಸಿಎಂ ರಘುಬರ್ ದಾಸ್ ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.
ಇನ್ನೂ ಬಿಹಾರದ ಎರಡನೇ ಹಂತದ ಚುನಾವಣೆಗಾಗಿ 46 ಅಭ್ಯರ್ಥಿಗಳುಳ್ಳ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. 2ನೇ ಹಂತಕ್ಕಾಗಿ ಇಂದು ಪ್ರಕಟವಾದ ಪಟ್ಟಿಯಲ್ಲಿ ಇಬ್ಬರು ಮಹಿಳಾ ಆಕಾಂಕ್ಷಿಗಳಿಗೆ ಈ ಬಾರಿ ಮಣೆ ಹಾಕಲಾಗಿದೆ. ರೇಣು ದೇವಿ ಅವರು ಬೆಟ್ಟಿಯಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಆಶಾ ಸಿನ್ಹಾ ಅವರು ದನಾಪುರ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಮಿಕ್ಕಂತೆ ಮಿತಿಲೇಶ್ ತಿವಾರಿ ಅವರು ಬೈಕುಂತ್ ಪುರ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್,28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಪ್ರಧಾನಿ ಮೋದಿ ಅವರಿಂದ SVAMITVA ಯೋಜನೆಯಡಿ ಆಸ್ತಿ ಕಾರ್ಡ್ ಬಿಡುಗಡೆ
ನವೆಂಬರ್.03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್.10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel