ಬೆಂಗಳೂರು : (Double shock to Sriramulu) ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಡಿಸಿಎಂ ಸ್ಥಾನದ ನಿರೀಕ್ಷೆಯಲ್ಲಿದ್ದ ಸಚಿವ ಶ್ರೀ ರಾಮುಲು ಅವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಡಬಲ್ ಶಾಕ್ ನೀಡಿದ್ದಾರೆ. (Double shock to Sriramulu)
ನಿನ್ನೆ ಶ್ರೀರಾಮುಲು ಬಳಿ ಇದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರಿಗೆ ಕೊಟ್ಟ ಸಿಎಂ ಇದೀಗ ರಾಮುಲುಗೆ ಮತ್ತೊಂದು ಆಘಾತ ನೀಡಿದ್ದಾರೆ.
ಇದನ್ನೂ ಓದಿ : ಕೊರೊನಾ ವೈಫಲ್ಯ ಕಳಂಕ: ಅಸಮಾಧಾನ ಹೊರಹಾಕಿದ್ರಾ ಸಚಿವ ಶ್ರೀರಾಮುಲು..!
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶ್ರೀರಾಮುಲ ಬಳಿಯಲ್ಲಿದ್ದ ಹಿಂದುಳಿದ ವರ್ಗಗಳ ಇಲಾಖೆಯನ್ನ ಹಿಂಪಡೆದುಕೊಂಡಿದ್ದಾರೆ. ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆಯನ್ನ ನೀಡಲಾಗಿದೆ.
ಡಿಸಿಎಂ ಗೋವಿಂದ ಕಾರಜೋಳ ಅವರ ಬಳಿ ಲೋಕಪಯೋಗಿ ಮಾತ್ರ ಉಳಿದಿದೆ. ಖಾತೆ ಬದಲಾವಣೆಗೆ ಆದೇಶಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಇದನ್ನೂ ಓದಿ : ಜನತೆಗೆ ಉತ್ತಮ ಆರೋಗ್ಯ ಕಲ್ಪಿಸಲು ಶಕ್ತಿ ಮೀರಿ ಕೆಲಸ ಮಾಡ್ತೇನೆ : ಸುಧಾಕರ್
ಇನ್ನು ಖಾತೆಗಳ ಬದಲಾವಣೆಯಿಂದ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಠಿಯಾಗಿದೆ. ಮೂಲ ಬಿಜೆಪಿಗರು ಸೇರಿದಂತೆ ಉತ್ತರ ಕರ್ನಾಟಕದ ಶಾಸಕರು ಈ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel