ಹುಬ್ಬಳ್ಳಿ: ಹುಬ್ಬಳ್ಳಿ ನಗರದ ರಸ್ತೆಗಳ ಅವ್ಯವಸ್ಥೆ ಖಂಡಿಸಿ ಜನಪ್ರತಿನಿಧಿಗಳ ವಿರುದ್ಧ ಹುಬ್ಬಳ್ಳಿ ನಗರದಲ್ಲಿ ಸ್ಥಳೀಯರು ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ನಗರದ ನ್ಯೂಕಾಟನ್ ಮಾರ್ಕೆಟ್ ರಸ್ತೆಯಲ್ಲಿ ರಸ್ತೆಯ ಹೊಂಡ ಗುಂಡಿಗಳಲ್ಲಿ ಆಟಿಕೆ, ಕಾಗದದ ದೋಣಿ ತೇಲಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುಂಡಿ ನೀರಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭಾವಚಿತ್ರ ತೇಲಿ ಬಿಟ್ಟು ರಸ್ತೆ ದುರಸ್ತಿಗೊಳಿಸುವಂತೆ ಜನರು ಗೋಗರೆದಿದ್ದಾರೆ. ಪ್ರತಿಭಟನೆಯಲ್ಲಿ ಚಿಕ್ಕ ಮಕ್ಕಳೂ ಭಾಗಿಯಾಗಿದ್ದರು.

ಇತ್ತೀಚೆಗೆ ಸುರಿಯುತ್ತಿರುವ ಮಳೆಯ ಹೊಡೆತಕ್ಕೆ ಹುಬ್ಬಳ್ಳಿ ನಗರದ ರಸ್ತೆಗಳೆಲ್ಲ ಹೊಂಡ-ಗುಂಡಿಮಯವಾಗಿವೆ. ಹದಗೆಟ್ಟ ರಸ್ತೆಯಿಂದ ಜನರು ಹೈರಾಣಾಗಿದ್ದು, ಪ್ರತಿಭಟನೆ ಹಾದಿ ಹಿಡಿದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








