ಚಾಮರಾಜನಗರ : ರಾಜ್ಯ ಸರ್ಕಾರದ ನಿರ್ದೇಶನದಂತೆ ಅ. 20 ರಿಂದ ಮಾರ್ಟಳ್ಳಿ ಸಮೀಪ ಇರುವ (kichhagutthi Maramma temple ) ಕಿಚ್ಚಗುತ್ತಿ ಮಾರಮ್ಮ ದೇವಾಲಯದಲ್ಲಿ ಮುಜರಾಯಿ ಇಲಾಖೆಯಿಂದ ಧಾರ್ಮಿಕ ಕೈಂ ಕಾರ್ಯಗಳನ್ನು ಕೈಗೊಂಡು ಅ. 24 ರ ಬಳಿಕ ಸಾರ್ವಜನಿಕರಿಗೆ ದರ್ಶನ ಭಾಗ್ಯ ಕಲ್ಪಿಸಲಾಗುವುದು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಸುಳ್ವಾಡಿ ಕಿಚ್ಚಗುತ್ತಿ ಮಾರಮ್ಮ ದೇವಾಲಯಕ್ಕೆ ( kichhagutthi Maramma temple )ಭೇಟಿ ನೀಡಿ ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರಿಗೆ ದೇವರ ದರ್ಶನ ನೀಡುವ ಸಲುವಾಗಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವುದನ್ನು ವೀಕ್ಷಣೆ ಮಾಡಿದರು.

ಈ ವೇಳೆ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ರಸ್ತೆ , ಶೌಚಾಲಯ , ನೀರು ಸೇರಿದಂತೆ ಮೂಲಭೂತ ಸೌಕಯ್ಯಕ್ಕೆ ಸಮಸ್ಯೆಯಾಗದಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ . ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚಿಸಿದರು .
ಸೂಳ್ಳಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯವನ್ನು ಮತ್ತೆ ತೆರೆದು ಭಕ್ತಾದಿಗಳ ದರ್ಶನಕ್ಕೆ ಅನುವು ಮಾಡಿ ಕೊಡಲು ರಾಜ್ಯ ಸರ್ಕಾರದಿಂದ ಆದೇಶವಾಗಿದೆ.
ಇದನ್ನೂ ಓದಿ : ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಆಟಿಕೆ, ಕಾಗದ ದೋಣಿ ತೇಲಿಸಿ ಹುಬ್ಬಳ್ಳಿಯಲ್ಲಿ ವಿನೂತನ ಪ್ರತಿಭಟನೆ
ಈ ಹಿನ್ನೆಲೆ ಅಕ್ಟೋಬರ್ 20 ರಿಂದ 24 ರವರೆಗೆ ಧಾರ್ಮಿಕ ದತ್ತಿ ಇಲಾಖೆಯ ಪ್ರಧಾನ ಆಗಮಿಕರ ಸಮ್ಮುಖದಲ್ಲಿ ವಿಧಿ ವಿಧಾನಗಳೊಂದಿಗೆ ಪೂಜಾ ಕೈಂಕಯ್ಯಗಳು ನಡೆಯಲಿದ್ದು 24 ರಂದು ಕುಂಭಾಭಿಷೇಕ ನೆರವೇರಲಿದೆ.
ಬಳಿಕ ಸಾರ್ವಜ ನಿಕರ ದರ್ಶನಕ್ಕೆ ಮುಕ್ತಗೊಳಿಸಲಾಗುವುದು . ಈ ಹಿನ್ನೆಲೆ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮುಖ್ಯರಸ್ತೆಯಿಂದ ಸಮರ್ಪಕ ರಸ್ತೆ, ಬೀದಿ ದೀಪ, ಕುಡಿಯುವನೀರು , ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕಯ್ಯ ಕಲ್ಪಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ. ರವಿ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೊಳ್ಳೇಗಾಲ ಉಪವಿಭಾಗಾಧಿಕಾರಿ ಗಿರೀಶ್ ದಿಲೀಪ್ ಬಡೋಲೆ , ತಹಶೀಲ್ದಾರ್ ಕುನಾಲ್ , ಪ್ರಭಾರ ಹನೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ರಾಜು , ಉಪತಹ ಸೀಲ್ದಾರ್ ಸುರೇಖಾ , ಸಹಾಯಕ ಕಾರ್ಯಪಾಲಕ ಅಭಿಯಂತರ ಸುರೇಂದ್ರ , ಗ್ರಾಮ ಲೆಕ್ಕಾಧಿಕಾರಿ ವಿನೋದ್ ಇದ್ದರು.
ಇದನ್ನೂ ಓದಿ : ಮಾಟಮಂತ್ರದಿಂದಲೇ ಕೋಟಿಕೋಟಿ ಆಸ್ತಿ ಸಂಪಾದನೆ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








