ಬಳ್ಳಾರಿ : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಜಿಲ್ಲೆಯಾದ್ಯಂತ ಪ್ರತಿದಿನ ಭಾರಿಯಾಗುತ್ತಿದ್ದು, ನಾನಾ ಅವಾಂತರಗಳು ಸೃಷ್ಠಿಯಾಗಿವೆ. ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಮಳೆರಾಜ ಜನರ ಬದುಕನ್ನೇ ಕಿತ್ತುಕೊಂಡಿದ್ದಾನೆ. ( Bridge Collapse Due To Heavy Rain In Bellary )

ಹೌದು..! ರಾರಾವಿ ಗ್ರಾಮದ ಬಳಿ ನೆರೆಯ ಆಂಧ್ರ ಪ್ರದೇಶ ಮತ್ತು ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಶಾಶ್ವತ ಸೇತುವೆ (Bridge) ಕಾಮಗಾರಿ ನಡೆಯುತ್ತಿದೆ.
ಈ ಹಿನ್ನೆಲೆ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಲಾಗಿದೆ. ಆದ್ರೆ ಮೊನ್ನೆ ಸುರಿದ ಮಹಾ ಮಳೆಗೆ ಸೇತುವೆ ಕೊಚ್ಚಿಹೋಗಿದೆ.
ಇದನ್ನೂ ಓದಿ : ಅ.24 ರ ಬಳಿಕ ಸುಳ್ವಾಡಿ ಕಿಚ್ಚಗುತ್ತಿ ಮಾರಮ್ಮ ದರ್ಶನ ಭಾಗ್ಯ
ಪರಿಣಾಮ ಸೇತುವೆ ರಸ್ತೆ ಕೆಸರು ಗದ್ದೆಯಂತಾಗಿದ್ದು, ವಾಹನಗಳು ಕೆಸರಿನಲ್ಲಿ ಸಿಲುಕಿಕೊಂಡು ಪರದಾಡೋ ಸ್ಥಿತಿ ನಿರ್ಮಾಣವಾಗಿದೆ. 
ಇನ್ನು ರಾರಾವಿ ಗ್ರಾಮದಿಂದ ಕೂಲಿಕಾರ್ಮಿಕರು ಇದೇ ಮಾರ್ಗವಾಗಿ ಸಿರಗುಪ್ಪಕ್ಕೆ ತೆರಳುತ್ತಿದ್ದರು. ಆದ್ರೆ ಈಗ ಸೇತುವೆ ಹಾಳಾಗಿರುವುದರಿಂದ ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದನ್ನೂ ಓದಿ : ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಆಟಿಕೆ, ಕಾಗದ ದೋಣಿ ತೇಲಿಸಿ ಹುಬ್ಬಳ್ಳಿಯಲ್ಲಿ ವಿನೂತನ ಪ್ರತಿಭಟನೆ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








