ತುಮಕೂರು : ವಿಧಾನಸೌಧದಲ್ಲಿ ಭ್ರಷ್ಟಾಚಾರ ಡ್ಯಾನ್ಸ್, ಭರತ ನಾಟ್ಯ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಜಿ.ಪರಮೇಶ್ವರ್ (G.Parmeshwar) ವಾಗ್ದಾಳಿ ನಡೆಸಿದ್ದಾರೆ.
ಉಪಚುನಾವಣೆ ಹಿನ್ನೆಲೆ ಶಿರಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಸಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್ (G.Parmeshwar), ನಮ್ಮವರನ್ನು ಕರೆದುಕೊಂಡು ಹೋಗಿ ಸರ್ಕಾರ ಮಾಡಿದ್ದೀರಾ? ಏನು ಕೆಲಸ ಮಾಡಿದ್ದೀರಾ?

ಇದನ್ನೂ ಓದಿ : ಕಾಂಗ್ರೆಸ್ ಬುದ್ಧಿಮಾಂದ್ಯ ಪಕ್ಷ : ಖುಷ್ಬೂ
ಸರ್ಕಾರ ಅಧಿಕಾರಕ್ಕೆ ಬಂದು 11 ತಿಂಗಳಾದ್ರೂ ವಯಸ್ಸಾದವರಿಗೆ ಪೆನ್ಷನ್ ಕೊಡ್ತಿಲ್ಲ. ಭ್ರಷ್ಟಾಚಾರ ವಿಧಾನಸೌಧದಲ್ಲಿ ಡ್ಯಾನ್ಸ್ ಮಾಡುತ್ತಿದೆ, ಭರತನಾಟ್ಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ, ಮಾಜಿ ಸಂಸದ ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಾಸಲು ಸತೀಶ್ ಹಾಗೂ ಶಪೀ ಅಹಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ : ನಾಳೆ ಬೆಳಗ್ಗೆ 11ಗಂಟೆಗೆ ಮುನಿರತ್ನ ನಾಮಪತ್ರ : ಸೋಮಶೇಖರ್
ಇನ್ನು ಕಾರ್ಯಕ್ರಮದಲ್ಲಿ ಕೊರೊನಾ ನಿಯಮಗಳನ್ನು ಗಾಳಿಗೆ ತೂರಲಾಗಿತ್ತು. ಜನರು ಮಾಸ್ಕ್ ಇಲ್ಲದೇ ಸಾಮಾಜಿಕ ಅಂತರ ಮರೆತು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








