ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್, ಬಿಜೆಪಿ (BJP) ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ವಾಗ್ದಾಳಿ ನಡೆಸಿದ್ದಾರೆ.
ಆರ್ ಆರ್ ನಗರ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ(H.D.Kumaraswamy), ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಪಕ್ಷದ ಆಟ ನಡೆಯಲ್ಲ.

ಕಾಂಗ್ರೆಸ್ ನಾಯಕರಿಂದ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ಯಾವ ಮುಖ ಇಟ್ಟಿಕೊಂಡು ಮತ ಕೇಳುತ್ತಾರೆ ಎಂದು ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ : ಮುನಿರತ್ನಗೆ ಟಿಕೆಟ್ : ಸಿಡಿದ ಆರ್.ಆರ್.ನಗರ ಮೂಲ ಬಿಜೆಪಿಗರು
ಹಾಗೇ ರಾಜ್ಯ ಬಿಜೆಪಿ (BJP) ಸರ್ಕಾರ ಕೊರೋನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಬಿಜೆಪಿಯವರು ಗೆಲ್ಲುವ ಭ್ರಮೆಯಲ್ಲಿದ್ದಾರೆ ಎಂದು ಕುಮಾರಸ್ವಾಮಿ ಕುಟುಕಿದರು.

ಇದೇ ವೇಳೆ ಜೆಡಿಎಸ್ ಅಭ್ಯರ್ಥಿ ಬಗ್ಗೆ ಮಾತನಾಡಿ, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರ ಪ್ರಚಾರ ಮಾಡುತ್ತೇನೆ. ಈ ಕ್ಷೇತ್ರ ಉಸ್ತುವಾರಿ ನಾನೇ ವಹಿಸಿಕೊಂಡಿದ್ದೇನೆ ಎಂದರು.
ಇದನ್ನೂ ಓದಿ : ಆರ್.ಆರ್. ನಗರ ಉಪ ಕದನ : ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








