ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಅದಕ್ಕಾಗಿ ಅಗತ್ಯ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ರಾಜ್ಯದ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗಿತ್ತು. ಅಲ್ಲದೆ ಒಂದು ವಾರದ ಹಿಂದೆ ರಾಜ್ಯದಲ್ಲಿ ಬಾರ್, ಪಬ್, ಸಿನಿಮಾ ಥಿಯೇಟರ್, ಮಾಲ್ ಬಂದ್ ಮಾಡುವಂತೆ ಸೂಚಿಸಲಾಗಿತ್ತು. ಆದರೂ ಸಹ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರಲಿಲ್ಲ. ಬದಲಾಗಿ ಕೊರೊನಾ ಹರುಡುವಿಕೆ ಹೆಚ್ಚಾಗುತ್ತಿದೆ. ಆ ಕಾರಣಕ್ಕೆ ರಾಜ್ಯದಲ್ಲಿ ಇನ್ನೂ ಒಂದು ವಾರ ಬಂದ್ ಮುಂದವರೆಸುವಂತೆ ಸೂಚನೆ ಬಂದಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನೂ ಒಂದು ವಾರ ಬಂದ್ ಮುಂದುವರೆಸುವ ಕುರಿತು ಮಧ್ಯಾಹ್ನದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಪ್ರಸ್ತುತ ಸೋಂಕು ನಿಯಂತ್ರಣವಾಗುತ್ತಿಲ್ಲ. ದಿನದಿಂದ ದಿನಕ್ಕೆ ಹರುಡುವಿಕೆಯ ಪ್ರಕರಣಗಳು ಹೆಚ್ಚಾಗುತ್ತಿವೆ.ಈ ಹಿನ್ನಲೆಯಲ್ಲಿ ಬಂದ್ ಗಡುವು ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.
ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...








